ಭೋಪಾಲ್: ಮಧ್ಯಪ್ರದೇಶದಲ್ಲಿ (Madhyapradesh) ಕಾಂಗ್ರೆಸ್ ಹೀನಾಯ ಸೋಲಿನ ಬೆನ್ನಲ್ಲೇ ಕಾಂಗ್ರೆಸ್ (Congress) ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.
ಗೆಲುವು ಖಚಿತವಾಗಿರುವ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವು ಸೋಲು ಕಂಡ ಮರುದಿನವೇ ಕಮಲ್‍ನಾಥ್ (Kamal Nath) ಅವರು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಬಿಜೆಪಿ ಕೈ ಹಿಡಿದ ಮಹಿಳೆಯರು
Advertisement
Advertisement
ಗೆಲುವಿನ ಬಗ್ಗೆ ಪಕ್ಷಕ್ಕೆ ಎಷ್ಟು ಮನವರಿಕೆಯಾಗಿತ್ತೆಂದರೆ ಮತ ಎಣಿಕೆಯ ದಿನ ಬೆಳಿಗ್ಗೆಯೇ ಕಮಲ್‍ನಾಥ್ ಅವರಿಗೆ ಅಭಿನಂದನೆ ಸಲ್ಲಿಸಿ ಬ್ಯಾನರ್‍ಗಳನ್ನು ಹಾಕಲಾಗಿತ್ತು. ಆದರೆ ಮಧ್ಯಾಹ್ನದ ವೇಳೆಗೆ ಬಿಜೆಪಿ ಮುನ್ನಡೆ ಸಾಧಿಸಿದ್ದರಿಂದ ಬ್ಯಾನರ್ ತೆರವುಗೊಳಿಸಲಾಯಿತು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಭಾರೀ ಮುನ್ನಡೆ
Advertisement
Advertisement
ರಾಜ್ಯದಲ್ಲಿ ಬಿಜೆಪಿ ವಿರುದ್ಧ ಅಲೆ ಕಂಡುಬಂದಿದ್ದರಿಂದ ಕಾಂಗ್ರೆಸ್ ಗೆಲುವಿನ ನಿರೀಕ್ಷೆಯಲ್ಲಿತ್ತು. ಹೀಗಾಗಿ ಹೆಚ್ಚಿನ ಪ್ರಚಾರವನ್ನು ಕಾಂಗ್ರೆಸ್ ನಾಯಕರು ಕೈಗೊಂಡಿರಲಿಲ್ಲ. ಇದು ಮತದಾರರೊಂದಿಗಿನ ಸಂವಹನದ ಮೇಲೆ ಪರಿಣಾಮ ಬೀರಿತು ಮತ್ತು ಪಕ್ಷದ ಸಂದೇಶವನ್ನು ರವಾನಿಸಲು ಸಾಧ್ಯವಾಗಲಿಲ್ಲ ಎಂದು ನಾಯಕರು ಬೇಸರ ವ್ಯಕ್ತಪಡಿಸಿದ್ದಾರೆ. ಐಎನ್‍ಡಿಐಎ ಒಕ್ಕೂಟದ ಸಮಾಜವಾದಿ ಪಕ್ಷಕ್ಕೆ ಭರವಸೆ ನೀಡಲಾದ ಐದರಿಂದ ಏಳು ಸ್ಥಾನಗಳನ್ನು ನಿರಾಕರಿಸುವುದು ಮೈತ್ರಿ ನಾಯಕರ ಕೋಪಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಮತ್ತೆ ಮಾಮಾಜಿ ಮ್ಯಾಜಿಕ್ – ಬಿಜೆಪಿ ಸುನಾಮಿಗೆ ಕಾಂಗ್ರೆಸ್ ಕೊಚ್ಚಿ ಹೋಗಿದ್ದು ಹೇಗೆ?
ಭವಿಷ್ಯದಲ್ಲಿ ರಾಜ್ಯದ ಪರಿಸ್ಥಿತಿ ಹೀಗಿದ್ದರೆ ಮುಂದೆ ನಾವು ಗೆಲ್ಲಲು ಸಾಧ್ಯವಿಲ್ಲ ಎಂದು ಓಮರ್ ಅಬ್ದುಲ್ಲಾ ಹೇಳಿದ್ದಾರೆ. ಇತ್ತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿ, ಮಧ್ಯಪ್ರದೇಶ, ಛತ್ತೀಸ್‍ಗಢ ಮತ್ತು ರಾಜಸ್ಥಾನವನ್ನು ಕಾಂಗ್ರೆಸ್ ಗೆಲ್ಲಬಹುದಿತ್ತು. ಆದರೆ ಕೆಲವು ಮತಗಳನ್ನು ಐಎನ್‍ಡಿಐಎ ಒಕ್ಕೂಟವು ಕಡಿತಗೊಳಿಸಿದೆ ಎಂದು ಹೇಳಿದರು.
ಕಾಂಗ್ರೆಸ್ ಸೋತಿದ್ದು ಹೇಗೆ?: ಮಧ್ಯಪ್ರದೇಶದಲ್ಲಿ ಮೊದಲೇ ಬಿಜೆಪಿ ಪ್ರಬಲವಾಗಿತ್ತು. ಈ ಚುನಾವಣೆಯಲ್ಲಿ ಬಿಜೆಪಿ ಬದಲಿ ನಾಯಕತ್ವದ ಸುಳಿವು ನೀಡಿತ್ತು. ಅಷ್ಟೇ ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಜನಪ್ರೀಯತೆ ಗುರುತಿಸುವಲ್ಲಿ ಕಾಂಗ್ರೆಸ್ ಮತ್ತೆ ವಿಫಲವಾಯಿತು. ಇದರ ಜೊತೆ 2019ರಲ್ಲಿ ಕಮಲ್ ನಾಥ್ ಜೊತೆ ಕಿತ್ತಾಟದಿಂದ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್‌ನಿಂದ ಹೊರ ಬಂದಿದ್ದರು. ಇದು ಕಾಂಗ್ರೆಸ್ ದೊಡ್ಡ ಹೊಡೆತ ನೀಡಿತ್ತು.