ಭೋಪಾಲ್: ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಬೀಳಿಸಿದ ಬೆನ್ನಲ್ಲೇ ಮಧ್ಯಪ್ರದೇಶದಲ್ಲಿ ಕಮಲ ಅರಳಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಮಂಗಳವಾರ ವಿಶ್ವಾಸ ಮತಯಾಚನೆಯಲ್ಲಿ ಕೇವಲ 99 ಮತಗಳನ್ನು ಪಡೆದಿತ್ತು. ಆದರೆ ಬಿಜೆಪಿಯು 105 ಸಂಖ್ಯಾಬಲದಿಂದ ದೋಸ್ತಿಯನ್ನು ಸೋಲಿಸಿದೆ. ಹೀಗಾಗಿ ಎಚ್.ಡಿ.ಕುಮಾರಸ್ವಾಮಿ ಅವರು ನಿನ್ನೆ ರಾತ್ರಿಯೇ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಮಧ್ಯಪ್ರದೇಶದಲ್ಲಿ ಕಮಲ್‍ನಾಥ್ ನೇತೃತ್ವದ ಸರ್ಕಾರವನ್ನು ಬೀಳಿಸಲು ಬಿಜೆಪಿ ಆಪರೇಷನ್ ಆರಂಭಿಸಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
Advertisement
ವಿಧಾನಸಭೆಯ ವಿಪಕ್ಷ ನಾಯಕ ಗೋಪಾಲ್ ಭಾರ್ಗವ್ ಅವರು ಹೈಕಮಾಂಡ್ ಆದೇಶಕ್ಕಾಗಿ ಕಾಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಪಕ್ಷದ ನಂಬರ್ 1 ಮತ್ತು ನಂಬರ್ 2 ವ್ಯಕ್ತಿಗಳಿಂದ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಆದೇಶ ಬಂದಲ್ಲಿ 24 ಗಂಟೆಯ ಒಳಗಡೆ ಕಮಲ್‍ನಾಥ್ ಸರ್ಕಾರ ಬೀಳಲಿದೆ ಎಂದು ಹೇಳಿದ್ದಾರೆ.
Advertisement
Madhya Pradesh Chief Minister Kamal Nath in Assembly: Aapke oopar wale number 1 aur 2 samajhdar hain, isliye aadesh nahi de rahe hain. Aap chahen to avishwas prastaav (no confidence motion) le aayen. https://t.co/ctUakKRZx1
— ANI (@ANI) July 24, 2019
Advertisement
ಕಮಲ್‍ನಾಥ್ ಸರ್ಕಾರವನ್ನು ಬೀಳಿಸಲು ನಾವು ಕಾಯುತ್ತಿದ್ದೇವೆ. ಮಧ್ಯಪ್ರದೇಶದ ಪರಿಸ್ಥಿತಿ ಕರ್ನಾಟಕಕ್ಕಿಂತ ಅತ್ಯಂತ ಕೆಟ್ಟದಾಗಿದೆ. ಇಲ್ಲಿನ ಸರ್ಕಾರವು ಏಳು ತಿಂಗಳು ಪೂರ್ಣಗೊಳಿಸಿದ್ದೆ ಆಶ್ಚರ್ಯಕರ ಹಾಗೂ ಇಲ್ಲಿಗೆ ಕಮಲ್‍ನಾಥ್ ಆಡಳಿತವನ್ನು ನಿಲ್ಲಿಸಬೇಕಿದೆ. 2018ರಲ್ಲಿ ನಡೆದ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ನಾವು ಸರ್ಕಾರ ರಚನೆಯ ಆತುರದಲ್ಲಿ ಇರಲಿಲ್ಲ. ಆದರೆ ಇಂದಿನ ಪರಿಸ್ಥಿತಿ ನಮಗೆ ಅನುಕೂಲವಾಗಿದೆ ಎಂದು ಗೋಪಾಲ್ ಭಾರ್ಗವ್ ತಿಳಿಸಿದ್ದಾರೆ.
Advertisement
ಕಮಲ್‍ನಾಥ್ ನೇತೃತ್ವದ ಸರ್ಕಾರವು ಯಾವುದೇ ಸೈದ್ದಾಂತಿಕ ಹಾಗೂ ತತ್ವದ ಮೇಲೆ ರಚನೆಯಾಗಿಲ್ಲ. ಅವರ ದುರಾಸೆಯ ಆಧಾರದ ಮೇಲೆ ಒಕ್ಕೂಟ ರಚನೆಯಾಗಿದೆ. ಒಕ್ಕೂಟದ ಪಕ್ಷಗಳ ಬೇಡಿಕೆ ಈಡೇರಿಸದ ದಿನ ಮೈತ್ರಿ ಕುಸಿದು ಬೀಳುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಧ್ಯಪ್ರದೇಶ ಸಿಎಂ ಕಮಲ್‍ನಾಥ್ ಅವರು, ಬಿಜೆಪಿ ನಂಬರ್ 1 ಹಾಗೂ 2 ಅತ್ಯಂತ ಬುದ್ಧಿವಂತರು. ಹೀಗಾಗಿಯೇ ರಾಜ್ಯ ನಾಯಕರಿಗೆ ಆದೇಶ ನೀಡಿಲ್ಲ. ಅವರಿಗೆ ಅಗತ್ಯವಿದ್ದರೆ ವಿಶ್ವಾಸ ಮತಯಾಚನೆ ನಿರ್ಣಯವನ್ನು ತರಬಹುದು ಎಂದು ಚಾಟಿ ಬೀಡಿದ್ದಾರೆ.
ಒಟ್ಟು 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ 2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 114, ಬಿಜೆಪಿ 109, ಪಕ್ಷೇತರ 1, ಬಿಎಸ್‍ಪಿ 2, ಎಸ್‍ಪಿ 2ರಲ್ಲಿ ಜಯಗಳಿಸಿದೆ. 2019ರ ಲೋಕಸಭಾ ಚುನಾವಣೆಯ ಒಟ್ಟು 29 ಕ್ಷೇತ್ರಗಳ ಪೈಕಿ ಬಿಜೆಪಿ 28 ರಲ್ಲಿ ಗೆದ್ದಿದ್ದರೆ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸಿತ್ತು. ಚಿಂದ್ವಾರಾ ಕ್ಷೇತ್ರದಿಂದ ಸಿಎಂ ಕಮಲ್‍ನಾಥ್ ಪುತ್ರ ನಕುಲ್ ನಾಥ್ ಜಯಗಳಿಸಿದ್ದರು.