ರಾಮನಗರ: ಕನಕಪುರ (Kanakapura) ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಕುಖ್ಯಾತ ಮನೆಗಳ್ಳರನ್ನು (Thief) ಬಂಧಿಸಿ 17 ಲಕ್ಷ ಮೌಲ್ಯದ 290 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ, ಕನಕಪುರ ತಾಲೂಕಿನ ಬಸವೇಶ್ವರ ನಗರದ ನಿವಾಸಿ ವನಿತಾ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲು ಮುರಿದು ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಕನಕಪುರ ಪೊಲೀಸ್ ಠಾಣೆಯಲ್ಲಿ ಮನೆ ಒಡತಿ ವನಿತಾ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ ಕನಕಪುರ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಐಎನ್‌ಎಸ್ ಗರುಡ ರನ್‌ವೇಯಲ್ಲಿ ನೌಕಾಪಡೆಯ ಹೆಲಿಕಾಪ್ಟರ್ ಪತನ – ಓರ್ವ ಸಿಬ್ಬಂದಿ ಸಾವು
- Advertisement
ಶಿವಮೊಗ್ಗ ಮೂಲದ ಜಾವೀದ್ ಅಲಿ ಹಾಗೂ ಬೆಂಗಳೂರು ಮೂಲದ ಮೀರ್ ಹುಸೇನ್ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 290 ಗ್ರಾಂ ಚಿನ್ನ, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ. ಬಂಧಿತ ಆರೋಪಿಗಳನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಮುಕೇಶ್ ಅಂಬಾನಿಗೆ ಜೀವ ಬೆದರಿಕೆ – ಆರೋಪಿ ಅರೆಸ್ಟ್
- Advertisement