ಪೌರತ್ವ ತಿದ್ದುಪಡಿ ವಿಚಾರದಲ್ಲಿ ಪರ ವಿರೋಧದ ಮಾತು ಕೇಳಿ ಬರುತ್ತಿವೆ. ತಮಿಳಿನ ಖ್ಯಾತ ನಟ ವಿಜಯ್ ಹೇಳಿದ್ದ ಹೇಳಿಕೆಯನ್ನು ಆಧರಿಸಿದ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ತಿರುಗೇಟು ನೀಡಿದ್ದಾರೆ. ಸಿಎಎ ಅನ್ನು ಅರ್ಥ ಮಾಡಿಕೊಂಡು ಮಾತನಾಡುವಂತೆ ನಟನಿಗೆ ಸಲಹೆ ನೀಡಿದ್ದಾರೆ ಕಂಗನಾ. ಇತ್ತೀಚೆಗಷ್ಟೇ ತಮಿಳಗ ವೆಟ್ರಿ ಕಳಗಂ ಪಕ್ಷ ಸ್ಥಾಪಿಸಿ ರಾಜಕೀಯ ಪ್ರವೇಶಿಸಿರುವ ನಟ ವಿಜಯ್ ದಳಪತಿ (Vijay Thalapathy) ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೆ ವಿರೋಧ ವ್ತಕ್ಯಪಡಿಸಿದ್ದರು.
Advertisement
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ (Narendra Modi) ನೇತೃತ್ವದ ಸರ್ಕಾರ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿ ಸೋಮವಾರವಷ್ಟೇ (ಮಾ.11) ಅಧಿಸೂಚನೆ ಹೊರಡಿಸಿತ್ತು. ಸಿಎಎ ಕಾಯ್ದೆಗೆ ಕೆಲವರು ಮೆಚ್ಚುಗೆ ಸೂಚಿಸಿದ್ರೆ, ಇನ್ನೂ ಕೆಲವರು ವಿರೋಧಿಸಿ ಸೋಶಿಯಲ್ ಮೀಡಿಯಾಗಳಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಬೆನ್ನಲ್ಲೇ ದಳಪತಿ ವಿಜಯ್ ಸಹ ಪ್ರತಿಕ್ರಿಯಿಸಿದ್ದರು.
Advertisement
Advertisement
ಸಿಎಎ ಜಾರಿಗೆ ವಿರೋಧಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ವಿಜಯ್, ಸಿಎಎ ಜಾರಿಗೆ ಜಾರಿ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ. ದೇಶದ ಎಲ್ಲಾ ನಾಗರಿಕರು ಸಾಮಾಜಿಕ ಸಾಮರಸ್ಯದಿಂದ ಬದುಕುವ ವಾತಾವರಣದಲ್ಲಿ ಭಾರತೀಯ ಪೌರತ್ವ ತಿದ್ದುಪಡಿ ಕಾಯಿದೆ-2019 (ಸಿಎಎ) ನಂತಹ ಯಾವುದೇ ಕಾನೂನನ್ನು ಜಾರಿಗೆ ತರುವುದು ಸ್ವೀಕಾರಾರ್ಹವಲ್ಲ ಎಂದಿದ್ದಾರೆ. ಅಲ್ಲದೇ ತಮಿಳುನಾಡಿನಲ್ಲಿ ಈ ಕಾಯ್ದೆ ಜಾರಿಯಾಗದಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ (Tamil Nadu government) ಮನವಿ ಮಾಡಿದ್ದರು.
Advertisement
ಸಿಎಎಯಲ್ಲಿ ಏನಿದೆ?
ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೆ ಒಳಗಾಗಿ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರರಿಗೆ ಭಾರತದ ಪೌರತ್ವ (Citizenship) ನೀಡಲಾಗುತ್ತದೆ. 2014ರ ಡಿಸೆಂಬರ್ 31ಕ್ಕೆ ಮೊದಲು ರಕ್ಷಣೆ ಬಯಸಿ ಭಾರತಕ್ಕೆ ಶರಣಾರ್ಥಿಗಳಾಗಿ ಬಂದಿರುವ ಹಿಂದೂಗಳು, ಕ್ರೈಸ್ತರು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳಿಗೆ ಮಾತ್ರ ಸಿಎಎ ಅನ್ವಯ ಪೌರತ್ವ ನೀಡಲಾಗುತ್ತದೆ. ಪೌರತ್ವ ನೋಂದಣಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿಯೇ ಮುಗಿಯಲಿದ್ದು, ದೇಶದಲ್ಲಿರುವ ಮುಸ್ಲಿಮರಿಗೆ ಸಿಎಎಯಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂಬುದನ್ನು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.