ಗ್ರೇಟ್ ಗ್ರ್ಯಾಂಡ್ ಮಸ್ತಿ ಎಂಬ ಅಡಲ್ಟ್ ಕಾಮಿಡಿ ಸಿನಿಮಾದ ಮೂಲಕ ಫೇಮಸ್ ಆಗಿರುವ ಕಂಗನಾ ಶರ್ಮಾ ಇದೀಗ ಹರಿಯಾಣದಲ್ಲಿ ಆಮ್ ಆದ್ಮಿ ಪಾರ್ಟಿ ಸೇರಿಕೊಂಡಿದ್ದಾರೆ. ಈ ಅಡಲ್ಟ್ ಕಾಮಿಡಿ ಸಿನಿಮಾದಲ್ಲಿ ಅಫ್ತಾಭ್ ಶಿವದಾಸ್ ಅವರ ನಾದಿನಿ ಪಾತ್ರ ಮಾಡಿದ್ದ ಕಂಗನಾ, ನಂತರ ಅನೇಕ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದರು. ಇದನ್ನೂ ಓದಿ : Exclusive- ಅಮೆಜಾನ್ ಪ್ರೈಮ್ನಲ್ಲಿ ‘ಕೆಜಿಎಫ್ 2’ : ಫಸ್ಟ್ ಟೈಮ್ ಮೆಂಬರ್ ಅಲ್ಲದವರೂ ಸಿನಿಮಾ ನೋಡಬಹುದು
ಗುರುವಾರ (ಮೇ 12) ಆಮ್ ಆದ್ಮಿ ಪಾರ್ಟಿ ಸೇರುತ್ತಿದ್ದಂತೆಯೇ ಕಂಗನಾ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಅದರಲ್ಲೂ ಕಂಗನಾ ಹಾಟ್ ಹಾಟ್ ಫೋಟೋಗಳನ್ನು ಅಭಿಮಾನಿಗಳು ಅಪ್ ಲೋಡ್ ಮಾಡುತ್ತಿದ್ದು, ಆಮ್ ಆದ್ಮಿ ಪಕ್ಷದ ಕುರಿತು ನಾನಾ ರೀತಿಯ ಟ್ರೋಲ್ ಗಳನ್ನೂ ಮಾಡಲಾಗುತ್ತಿದೆ. ಇದನ್ನೂ ಓದಿ : ಕಾಲೇಜು ದಿನಗಳಲ್ಲೇ ರಮ್ಯಾ ಮೇಲೆ ಕ್ರಶ್ ಆಗಿದೆ : ರಕ್ಷಿತ್ ಶೆಟ್ಟಿ
ತಾವು ಆಮ್ ಆದ್ಮಿ ಪಕ್ಷವನ್ನು ಸೇರಿಕೊಂಡಿರುವ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಕಂಗನಾ, ‘ನಿಮ್ಮ ಪ್ರೀತಿ ಮತ್ತು ಬೆಂಬಲ ನಿರಂತರವಾಗಿರಲಿ. ನಿಮ್ಮೆಲ್ಲರಿಗೂ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ. ಆಮ್ ಆದ್ಮಿ ಪಕ್ಷ ಕೂಡ ತನ್ನ ಅಧಿಕೃತ ಪೇಜ್ ನಲ್ಲಿ ಈ ವಿಷಯವನ್ನು ಹಂಚಿಕೊಂಡಿದೆ. ಇದನ್ನೂ ಓದಿ : ಪತಿ ಉಪ್ಪಿಗಿಂತಲೂ ಪತ್ನಿ ಪ್ರಿಯಾಂಕಾ ಉಪೇಂದ್ರ ಫಾಸ್ಟ್ : ಡಿಟೆಕ್ಟೀವ್ ತೀಕ್ಷ್ಣ @ 50
2016ರಲ್ಲಿ ಬಾಲಿವುಡ್ ಪ್ರವೇಶ ಮಾಡಿರುವ ಈ ನಟಿ, ಆನಂತರ ಸಾಕಷ್ಟು ಚಿತ್ರಗಳಲ್ಲಿ ಮತ್ತು ಶೋಗಳಲ್ಲಿ ಕಾಣಿಸಿಕೊಂಡಿದ್ದಾರೆ. ಒಂದು ರೀತಿಯಲ್ಲಿ ಹಾಟ್ ಹಾಟ್ ಪಾತ್ರಗಳಿಗೆ ಸೀಮಿತವಾಗಿ ಉಳಿದರೂ, ತಮ್ಮದೇ ಆದ ಅಭಿಮಾನಿ ಬಳಗ ಹೊಂದಿದ್ದಾರೆ. ‘ರಾಮ್ ರತನ್’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರೆ, ಮ್ಯೂಸಿಕ್ ವಿಡಿಯೋ ಸಾಂಗ್ ಗಳಿಗೂ ಹೆಜ್ಜೆ ಹಾಕಿದ್ದಾರೆ.