ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಅವರು ಜ.22ರಂದು ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಸಾಕ್ಷಿಯಾಗಲು ಅಯೋಧ್ಯೆಯಲ್ಲಿದ್ದಾರೆ. ಇದೀಗ ರಾಮಮಂದಿರದ ಮಹತ್ವದ ಬಗ್ಗೆ ಹೇಳಯವುದರ ಜೊತೆಗೆ ಅಯೋಧ್ಯೆಯಲ್ಲಿ ಕಂಗನಾ ಹನುಮನ ಮಂದಿರ ಶುಚಿಗೊಳಿಸಿದ್ದಾರೆ.
ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭಗೊಂಡಿದೆ. ಇದರ ನಡುವೆ ಕನ್ನಡದ ನಟಿ-ನಟಿಯರು, ಬಾಲಿವುಡ್ ಚಿತ್ರರಂಗದ ಕಲಾವಿದರಿಗೆ ರಾಮಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗಲು ಆಹ್ವಾನ ದೊರೆತಿದೆ. ಅದರಂತೆ ಕಂಗನಾಗೂ ಕೂಡ ವಿಶೇಷ ಆಹ್ವಾನ ನೀಡಲಾಗಿದೆ. ಇದನ್ನೂ ಓದಿ:ಬ್ರೈಡಲ್ ಪಾರ್ಟಿ ಸಂಭ್ರಮದಲ್ಲಿ ಆಶಿಕಾ ರಂಗನಾಥ್ ಸಹೋದರಿ ಅನುಷಾ

View this post on Instagram
ಈ ಐತಿಹಾಸಿಕ ದಿನಕ್ಕೆ ಸಾಕ್ಷಿಯಾಗಲು ಸಾಧ್ಯವಾಗುವುದು ತಮ್ಮ ಹಿಂದಿನ ಜೀವನದ ಕರ್ಮದ ಫಲವಾಗಿ. ಈ ಮಹತ್ವದ ದಿನವನ್ನು ತರಲು ದೇಶವು ಒಗ್ಗೂಡಿದ್ದು, ಇಡೀ ರಾಷ್ಟ್ರಕ್ಕಿದು ಅದೃಷ್ಟದ ಕ್ಷಣವೆಂದು ಕಂಗನಾ ಮಾತನಾಡಿದ್ದಾರೆ. ಅಯೋಧ್ಯೆಯ ದರ್ಶನ ಪಡೆಯಲು ಹಲವು ಜನ್ಮಗಳ ಪುಣ್ಯ ಮಾಡಿರಬೇಕು ಎಂದು ಕಂಗನಾ ಹೇಳಿದ್ದಾರೆ. ಈ ಕಾರ್ಯಕ್ರಮ ಮುಗಿಯೋವರೆಗೂ ಅಯೋಧ್ಯೆಯಲ್ಲಿರೋದಾಗಿ ಕಂಗನಾ ತಿಳಿಸಿದ್ದಾರೆ.

ಈ ವೇಳೆ, ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಗುರು ರಾಮಭದ್ರಾಚಾರ್ಯರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕ್ಷಣಗಳ ಫೋಟೋಗಳನ್ನು ಕಂಗನಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.


