ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುರಿತಾದ ‘ಎಮರ್ಜೆನ್ಸಿ’ ಸಿನಿಮಾ ಕುರಿತು ಅಪ್ ಡೇಟ್ ನೀಡಿದ್ದಾರೆ ನಟಿ ಕಂಗನಾ ರಣಾವತ್. ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಅವರು, ಈ ನಡುವೆ ವಿಶ್ರಾಂತಿ ತಗೆದುಕೊಳ್ಳದೇ ಸಿನಿಮಾ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿದಿದ್ದು, ಈ ಸಿನಿಮಾಗಾಗಿ ತಮ್ಮೆಲ್ಲ ಆಸ್ತಿಯನ್ನು ಅಡ ಇಟ್ಟಿರುವುದಾಗಿ ಬರೆದುಕೊಂಡಿದ್ದಾರೆ.
ಎಮರ್ಜೆನ್ಸಿ ಸಿನಿಮಾ ಕಂಗನಾ ಪಾಲಿಗೆ ಅಳಿವು ಉಳಿವಿನ ಪ್ರಶ್ನೆ. ಈ ಸಿನಿಮಾದಲ್ಲಿ ಕೇವಲ ನಟಿಯಾಗಿ ಮಾತ್ರವಲ್ಲ, ನಿರ್ದೇಶಕಿಯಾಗಿ, ನಿರ್ಮಾಪಕಿಯಾಗಿಯೂ ಅವರು ಕೆಲಸ ಮಾಡಿದ್ದಾರೆ. ಹಾಗಾಗಿ ಜವಾಬ್ದಾರಿ ಜಾಸ್ತಿ ಮಾಡಿಕೊಂಡಿದ್ದಾರೆ. ಮೂರು ಜವಾಬ್ದಾರಿ ಹೊತ್ತುಕೊಂಡಿರುವ ಕಾರಣಕ್ಕಾಗಿ ಅವರು ತಮ್ಮ ಆಸ್ತಿಯನ್ನು ಅಡವಿಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.
ಈ ಸಿನಿಮಾದಲ್ಲಿ ಅವರು ಇಂದಿರಾ ಗಾಂಧಿಯ ಪಾತ್ರವನ್ನು ನಿರ್ವಹಿಸಿದ್ದು, ಕೆಲ ಫೋಟೋಗಳನ್ನೂ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಡೆಂಗ್ಯೂ ಜ್ವರದಿಂದ ತಾವು ಬಳಲಿದ್ದರ ಕುರಿತಾಗಿಯೂ ಅವರು ಹೇಳಿಕೊಂಡಿದ್ದಾರೆ. ಕಡಿಮೆ ರಕ್ತ ಕಣಗಳ ನಡುವೆಯೂ ತಾವು ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದರ ನೋವನ್ನು ಅವರು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k