ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಕುರಿತಂತೆ ರಾಷ್ಟಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್ (Kangana Ranaut) ಪ್ರತಿಕ್ರಿಯೆ ನೀಡಿದ್ದಾರೆ. ‘ಈ ದೇಶವು ಅಮಿತಾ ಶಾ ಮತ್ತು ನರೇಂದ್ರ ಮೋದಿ ಅವರ ಸುರಕ್ಷಿತರ ಕೈಯಲ್ಲಿದೆ. ದೇಶವು ಸುರಕ್ಷಿತರ ಕೈಯಲ್ಲಿ ಇರುವುದರಿಂದ ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ. ನನಗೂ ಈ ಹಿಂದೆ ಜೀವ ಬೆದರಿಕೆ ಕರೆ ಬಂದಿತ್ತು. ನನಗೂ ಭದ್ರತೆ ನೀಡಲಾಗಿತ್ತು’ ಎಂದು ಹೇಳಿದ್ದಾರೆ.
Advertisement
ಲಾರೆನ್ಸ್ ಬಿಷ್ಣೋಯ್ ಅಂಡ್ ಗ್ಯಾಂಗ್ ಜೀವ ಬೆದರಿಕೆ ಹಾಕಿರುವ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ನಟ ಸಲ್ಮಾನ್ ಖಾನ್, ‘ನನ್ನನ್ನು ಬಂದೂಕುಗಳು ಕಾಯುತ್ತಿವೆ. ಸಾಕಷ್ಟು ಭಯದಲ್ಲಿ ಬದುಕುತ್ತಿರುವೆ. ಯಾಕೆ ಅವರು ನನಗೆ ಗನ್ ಪಾಯಿಂಟ್ ಇಡುತ್ತಿದ್ದಾರೆ ಎನ್ನುವುದು ಇನ್ನೂ ಅರ್ಥವಾಗುತ್ತಿಲ್ಲ. ಮುಗಿದು ಹೋದ ಪ್ರಕರಣವನ್ನು ಮತ್ತೆ ಮತ್ತೆ ಕೆದುಕುತ್ತಿದ್ದಾರೆ’ ಎಂದಿದ್ದಾರೆ.
Advertisement
Advertisement
ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಅವರ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಗೆ ಮುಂಬೈ (Mumbai) ಪೊಲೀಸರು (Police) ಟೈಟ್ ಸೆಕ್ಯೂರಿಟಿ ನೀಡಿದ್ದಾರೆ. ಅಲ್ಲದೇ, ಸುಖಾಸುಮ್ಮನೆ ಅವರ ಮನೆ ಸುತ್ತ ಓಡಾಡುವಂತಿಲ್ಲ ಹಾಗೂ ಮನೆಯ ಮುಂದೆ ನಿಲ್ಲುವಂತಿಲ್ಲ ಎಂದು ಮುಂಬೈ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಇದನ್ನೂ ಓದಿ:ಅಖಿಲ್ ಅಕ್ಕಿನೇನಿ ಜೊತೆ ಜಾನ್ವಿ ಕಪೂರ್ ರೊಮ್ಯಾನ್ಸ್
Advertisement
ಈಗಾಗಲೇ ಮನೆ ಸುತ್ತಮುತ್ತ ತಪಾಸಣೆ ಕಾರ್ಯವನ್ನೂ ಪೊಲೀಸರು ಆರಂಭಿಸಿದ್ದು, ಯಾವುದೇ ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ತಿಳಿಸಿದ್ದಾರೆ. ಸಲ್ಮಾನ್ ಖಾನ್ ಅವರನ್ನು ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಕೊಲ್ಲುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಪೊಲೀಸರು ಅಗತ್ಯ ಕ್ರಮಗಳನ್ನು ತಗೆದುಕೊಳ್ಳಲು ಮುಂದಾಗಿದ್ದಾರೆ.
ಕೃಷ್ಣಮೃಗ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ ಸ್ಟರ್ (gangster) ಲಾರೆನ್ಸ್ ಬಿಷ್ಣೋಯ್ (Lawrence Bishnoi) ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ನಡುವಿನ ಕಾಳಗ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈಗಾಗಲೇ ಸಲ್ಮಾನ್ ಖಾನ್ ಕೊಲ್ಲಲು (Death Threats) ಬಿಷ್ಣೋಯ್ ಮತ್ತು ಟೀಮ್ ಹಲವು ರೀತಿಯಲ್ಲಿ ಪ್ರಯತ್ನ ಮಾಡಿ ವಿಫಲವಾಗಿದೆ. ಈ ಸಂಬಂಧವಾಗಿ ಅನೇಕರು ಬಂಧನ ಕೂಡ ಆಗಿದ್ದಾರೆ. ಸ್ವತಃ ಬಿಷ್ಣೋಯ್ ಜೈಲಿನಲ್ಲೇ ಇದ್ದಾನೆ. ಜೈಲಿನಿಂದಲೇ ಮತ್ತೆ ಸಲ್ಮಾನ್ ಬಗ್ಗೆ ಮಾತನಾಡಿದ್ದಾನೆ.
ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಲಾರೆನ್ಸ್ ಬಿಷ್ಣೋಯ್ ‘ನನ್ನ ಜೀವನದ ಅಂತಿಮ ಗುರಿ ಅಂತಿದ್ದರೆ ಅದು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ಆಗಿದೆ. ಸಲ್ಮಾನ್ ಖಾನ್ ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ದ್ವೇಷ ಕೊನೆಗೊಳ್ಳುತ್ತದೆ’ ಎಂದು ಮಾತನಾಡಿದ್ದಾನೆ. ಅವನ ಈ ಮಾತು ಬಾಲಿವುಡ್ ನಲ್ಲಿ ಭಾರೀ ಆತಂಕ ಸೃಷ್ಟಿ ಮಾಡಿದೆ.