ಅಂದುಕೊಂಡಂತೆ ಆಗಿದ್ದರೆ ಬಾಲಿವುಡ್ ನಟ ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ (Emergency) ಸಿನಿಮಾ ನವೆಂಬರ್ 24ರಂದು ರಿಲೀಸ್ (Release) ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಬಿಡುಗಡೆ ದಿನಾಂಕವನ್ನು ಮುಂದಕ್ಕೆ ಹಾಕಿದ್ದಾರೆ ಕಂಗನಾ. ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು ‘ನಾವು ಘೋಷಿಸಿದ ತಿಂಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಸಿನಿಮಾಗಳು ರಿಲೀಸ್ ಆಗುತ್ತಿದ್ದು, 2024ರಲ್ಲಿ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿದ್ದೇವೆ ಎಂದು ಬರೆದುಕೊಂಡಿದ್ದಾರೆ.
ಕಂಗನಾ ರಣಾವತ್ (Kangana Ranaut) ಸದ್ಯ ಎರಡು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಒಂದು ಸಿನಿಮಾವನ್ನು ಅವರೇ ನಿರ್ಮಾಣ ಮಾಡಿ, ನಿರ್ದೇಶನ ಮತ್ತು ನಟನೆ ಮಾಡುತ್ತಿದ್ದರೆ ಮತ್ತೊಂದು ಚಿತ್ರದಲ್ಲಿ ಕೇವಲ ನಟಿಯಾಗಿದ್ದಾರೆ. ಈ ಎರಡೂ ಸಿನಿಮಾಗಳ ನಡುವೆ ಅವರು ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದು, ಆ ಸಿನಿಮಾ ಬಗ್ಗೆ ಸುಳಿವೊಂದನ್ನು ನೀಡಿದ್ದಾರೆ. ಎಮರ್ಜೆನ್ಸಿ ಸಿನಿಮಾ ತೆರೆಗೆ ಬರುತ್ತಿದ್ದಂತೆಯೇ ಲೆಜೆಂಡ್ ಸ್ಟುಡಿಯೋಸ್ ಬ್ಯಾನರ್ ನಲ್ಲಿ ತಯಾರಾಗಲಿರುವ, ಸಂದೀಪ್ ಸಿಂಗ್ (Sandeep Singh) ನಿರ್ಮಾಣದ ಹೊಸ ಸಿನಿಮಾದಲ್ಲಿ ಅವರು ನಟಿಸಲಿದ್ದಾರಂತೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುರಿತಾದ ‘ಎಮರ್ಜೆನ್ಸಿ’ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಈ ಸಿನಿಮಾಗಾಗಿ ತಮ್ಮೆಲ್ಲ ಆಸ್ತಿಯನ್ನು ಅಡ ಇಟ್ಟಿರುವುದಾಗಿ ಬರೆದುಕೊಂಡಿದ್ದಾರೆ. ಎಮರ್ಜೆನ್ಸಿ ಸಿನಿಮಾ ಕಂಗನಾ ಪಾಲಿಗೆ ಅಳಿವು ಉಳಿವಿನ ಪ್ರಶ್ನೆ. ಈ ಸಿನಿಮಾದಲ್ಲಿ ಕೇವಲ ನಟಿಯಾಗಿ ಮಾತ್ರವಲ್ಲ, ನಿರ್ದೇಶಕಿಯಾಗಿ, ನಿರ್ಮಾಪಕಿಯಾಗಿಯೂ ಅವರು ಕೆಲಸ ಮಾಡಿದ್ದಾರೆ.
ಎಮರ್ಜೆನ್ಸಿ ಸಿನಿಮಾದಲ್ಲಿ ಕಂಗನಾ ಜವಾಬ್ದಾರಿ ಜಾಸ್ತಿ ಮಾಡಿಕೊಂಡಿದ್ದಾರೆ. ಮೂರು ಜವಾಬ್ದಾರಿ ಹೊತ್ತುಕೊಂಡಿರುವ ಕಾರಣಕ್ಕಾಗಿ ಅವರು ತಮ್ಮ ಆಸ್ತಿಯನ್ನು ಅಡವಿಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಇಂದಿರಾ ಗಾಂಧಿಯ ಪಾತ್ರವನ್ನು ನಿರ್ವಹಿಸಿದ್ದು, ಕೆಲ ಫೋಟೋಗಳನ್ನೂ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]