ತಮಿಳಿನ ಸ್ಟಾರ್ ನಟ ಸೂರ್ಯ (Suriya) ನಟನೆಯ ಬಹುನಿರೀಕ್ಷಿತ ‘ಕಂಗುವ’ (Kanguva) ಸಿನಿಮಾ ರಿಲೀಸ್ ಸಜ್ಜಾಗಿದೆ. ಇದೀಗ ಸೂರ್ಯ ಮತ್ತು ದಿಶಾ (Disha Patani) ಕಾಣಿಸಿಕೊಂಡಿರುವ ರೊಮ್ಯಾಂಟಿಕ್ ಸಾಂಗ್‌ವೊಂದು ಚಿತ್ರತಂಡ ರಿಲೀಸ್ ಮಾಡಿದೆ. ಸಾಂಗ್ ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಮಿಲಿಯನ್‌ಗಟ್ಟಲೇ ವಿವ್ಸ್ ಪಡೆದಿದೆ.
ಮೊದಲ ಬಾರಿಗೆ ಸೂರ್ಯ ಮತ್ತು ದಿಶಾ ಜೊತೆಯಾಗಿ ನಟಿಸುತ್ತಿದ್ದಾರೆ. ಸದ್ಯ ಚಿತ್ರದ ‘ಯೋಲೋ’ (Yolo) ಎಂಬ ಚೆಂದದ ಸಾಂಗ್ ಅನ್ನು ರಿಲೀಸ್ ಆಗಿ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಹಾಡಿನಲ್ಲಿ ಸೂರ್ಯ ಮತ್ತು ದಿಶಾ ಕೆಮಿಸ್ಟ್ರಿ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಹಾಗಾಗಿ ಫ್ಯಾನ್ಸ್‌ಗೆ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದನ್ನೂ ಓದಿ:ಅಜ್ಜಿಯ ನೆನೆದು ಭಾವನಾತ್ಮಕ ಪತ್ರ ಬರೆದ ಸುದೀಪ್ ಪುತ್ರಿ
ಈ ಸಿನಿಮಾವು ಬಹುಭಾಷೆಗಳಲ್ಲಿ ನವೆಂಬರ್ 14ರಂದು ರಿಲೀಸ್ ಆಗುತ್ತಿದೆ. ಸೂರ್ಯ ಜೊತೆ ದಿಶಾ ಮತ್ತು ಬಾಬಿ ಡಿಯೋಲ್ (Bobby Deol), ಜಗಪತಿ ಬಾಬು ನಟಿಸಿದ್ದಾರೆ.