ಡಾಲಿ ಟೆಂಪಲ್ ರನ್, ಹುಟ್ಟೂರಿನ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ

Public TV
2 Min Read
dhananjay

ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ (Daali Dhananjay) ಅವರು ಅರಸೀಕೆರೆಯ ಶ್ರೀ ಜೇನುಕಲ್ ಸಿದ್ದೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಶೂಟಿಂಗ್‌ಗೆ ಬ್ರೇಕ್ ಹಾಕಿ ಸಹೋದರರ ಜೊತೆ ದೇವರ ಸನ್ನಿಧಿಗೆ ಡಾಲಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ:ಮದುವೆಯಾದ ಒಂದೇ ವರ್ಷಕ್ಕೆ ಪತಿಯನ್ನು ಕಳೆದುಕೊಂಡ ನಟಿ ಶ್ರುತಿ

dhananjay

ಚಂದನವನದ ನಟ, ನಿರ್ಮಾಪಕ (Producer) ಡಾಲಿ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡದ ಜೊತೆ ತೆಲುಗು ಸಿನಿಮಾಗಳಲ್ಲಿ ಅವರು ಆಕ್ಟೀವ್ ಆಗಿದ್ದಾರೆ. ಚಿತ್ರೀಕರಣದಲ್ಲಿ ಬ್ಯುಸಿ ಇದ್ದ ನಟ, ಶೂಟಿಂಗ್‌ಗೆ ಕೊಂಚ ಬ್ರೇಕ್ ನೀಡಿ ಹುಟ್ಟಿದ ಊರಿಗೆ ಡಾಲಿ ಭೇಟಿ ನೀಡಿದ್ದಾರೆ. ಅರಸೀಕೆರೆಯ (Arasikere) ಶ್ರೀ ಜೇನುಕಲ್ ಸಿದ್ದೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದಿದ್ದಾರೆ. ಸಹೋದರರ ಜೊತೆ ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತಿ ಬಾಲ್ಯದ ದಿನಗಳನ್ನ ಸ್ಮರಿಸಿದ್ದಾರೆ.

dhananjay 1 1

ನಟ ಧನಂಜಯ್ ಹುಟ್ಟುಹಬ್ಬಕ್ಕೆ ದಿನಗಣನೆ ಶುರುವಾಗಿದೆ. ನಟನಾಗಿ, ನಿರ್ಮಾಪಕನಾಗಿ ಖ್ಯಾತಿಗಳಿಸಿರುವ ಡಾಲಿ ಧನಂಜಯ್ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ. ಕಾಮನ್ ಮ್ಯಾನ್ ಹೀರೋ ಅಂತನೇ ಬಿರುದು ಪಡೆದಿರುವ ಡಾಲಿ ಈ ಬಾರಿ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ. ತನ್ನ ಬರ್ತಡೇ ದಿನ ಅಭಿಮಾನಿಗಳ ಜೊತೆ ಸಮಯ ಕಳೆಯಲು ನಿರ್ಧರಿಸಿದ್ದಾರೆ. ಅಂದಹಾಗೆ ಧನಂಜಯ್ ಹುಟ್ಟುಹಬ್ಬ ಆಗಸ್ಟ್ 23ರಂದು ಇದ್ದು, ಈಗಾಗಲೇ ಅಭಿಮಾನಿಗಳ ಸಂಭ್ರಮ ಶುರುವಾಗಿದೆ. ಡಾಲಿ ಉತ್ಸವಕ್ಕೆ ಅಭಿಮಾನಿಗಳು ಸಜ್ಜಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್‌ಗಳನ್ನು ಶೇರ್ ಮಾಡಿ ಸಂಭ್ರಮಿಸುತ್ತಿದ್ದಾರೆ.

ಈ ಬಾರಿಯ ಹುಟ್ಟುಹಬ್ಬವನ್ನು ಅಭಿಮಾನಿಗಳು ಡಾಲಿ ಉತ್ಸವ ಹೆಸರಿನಲ್ಲಿ ಆಚರಿಸುತ್ತಿದ್ದಾರೆ. ಡಾಲಿ ಉತ್ಸವ ಎಂದು ಹೆಸರಿಟ್ಟು ಅಭಿಮಾನದ ತೇರು ಎಳೆಯೋಣ ಬನ್ನಿ ಎಂದು ಟ್ಯಾಗ್ ಲೈನ್ ಇಡಲಾಗಿದೆ. ಈಗಾಗಲೇ ಅಭಿಮಾನಿಗಳು ಉತ್ಸವಕ್ಕೆ ರೆಡಿಯಾಗಿದ್ದಾರೆ. ಅಂದಹಾಗೆ ಈ ಬಾರಿಯ ಧನಂಜಯ್ ಹುಟ್ಟುಹಬ್ಬ ತುಂಬನೇ ವಿಶೇಷ. 4 ವರ್ಷಗಳ ಬಳಿಕ ಅದ್ದೂರಿಯಾಗಿ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ ಜೊತೆಗೆ ಡಾಲಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟು 10 ವರ್ಷಗಳಾಗಿದೆ. ಹಾಗಾಗಿ ಈ ಬಾರಿಯ ಹುಟ್ಟುಹಬ್ಬ ಧನಂಜಯ್ ಅವರಿಗೆ ತುಂಬಾ ವಿಶೇಷವಾಗಿದೆ. ಅಂದಹಾಗೆ, ಡಾಲಿ ಪ್ರಸ್ತುತ ಪರಮೇಶ್ವರ್‌ ಗುಂಡ್ಕಲ್‌ ನಿರ್ದೇಶನದ ಚಿತ್ರದಲ್ಲಿ ಬ್ಯುಸಿಯಿದ್ದಾರೆ. ಮೈಸೂರಿನಲ್ಲಿ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ.

Share This Article