ಸ್ಯಾಂಡಲ್‍ವುಡ್‍ನಲ್ಲಿ ಸಖತ್ ಟಾಕ್ ಕ್ರಿಯೇಟ್ ಮಾಡಿರುವ ಚಿತ್ರ ‘ಕಾಣದಂತೆ ಮಾಯವಾದನು’. ವಿಕಾಸ್, ಸಿಂಧು ಲೋಕ್‍ನಾಥ್ ಅಭಿಯಿಸಿರುವ ಈ ಚಿತ್ರ ಇದೇ ತಿಂಗಳ 31ಕ್ಕೆ ಬಿಡುಗಡೆಯಾಗುತ್ತಿದೆ. ವಿಭಿನ್ನ ಕಥಾಹಂದರ, ಸ್ಟೋರಿ ಲೈನ್ ಇರುವ ಈ ಚಿತ್ರವನ್ನು ರಾಜ್ ಪಾತಿಪಾಟಿ ನಿರ್ದೇಶನ ಮಾಡಿದ್ದಾರೆ. ಜಯಮ್ಮನ ಮಗ ಚಿತ್ರದಲ್ಲಿ ದುನಿಯಾ ವಿಜಿಗೆ ಆ್ಯಕ್ಷನ್ ಕಟ್ ಹೇಳಿದ್ದ ವಿಕಾಸ್ ಈ ಚಿತ್ರದ ಮೂಲಕ ನಾಯಕ ನಟನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇದೇ ತಿಂಗಳ 31ಕ್ಕೆ ಈ ಚಿತ್ರ ಚಿತ್ರಮಂದಿರದ ಅಂಗಳಕ್ಕೆ ಬರುತ್ತಿದೆ.
ರಾಜ್ ಪಾತಿಪಾಟಿ ಮೊದಲ ಬಾರಿ ಆಕ್ಷನ್ ಕಟ್ ಹೇಳಿರೋ ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದ ಪಡೆದುಕೊಂಡಿರೋದು ಬಿಡುಗಡೆಯ ಹೊಸ್ತಿಲಲ್ಲಿರುವ ಚಿತ್ರತಂಡಕ್ಕೆ ಖುಷಿ ನೀಡಿದೆ. ಮುಗ್ಧ ಪ್ರೇಮಕಥೆ ಚಿತ್ರದಲ್ಲಿದ್ದು, ಸಾವನಪ್ಪುವ ಪ್ರಿಯಕರ ದೆವ್ವವಾಗಿ ಬಂದು ಹೇಗೆ ತನ್ನ ಪ್ರೀತಿಯನ್ನು ಕಾಪಾಡಿಕೊಳ್ಳುತ್ತಾನೆ ಎನ್ನುವ ಇಂಟ್ರಸ್ಟಿಂಗ್ ಕಥಾಹಂದರ ಚಿತ್ರದಲ್ಲಿದೆ. ಲವ್, ಆಕ್ಷನ್, ಹಾರಾರ್, ಥ್ರಿಲ್ಲರ್ ಅಂಶಗಳು ಚಿತ್ರದಲ್ಲಿದ್ದು ಪ್ರೇಕ್ಷಕನಿಗೆ ಒಂದು ಪವರ್ ಪ್ಯಾಕ್ಡ್ ಎಂಟಟೈನ್ಮೆಂಟ್ ಸಿಗೋದ್ರಲ್ಲಿ ಡೌಟೇ ಇಲ್ಲ ಅಂತಿದೆ ಚಿತ್ರತಂಡ.
ಸೆನ್ಸಾರ್ ಅಂಗಳದಲ್ಲಿ ಯು/ಎ ಸರ್ಟಿಫಿಕೇಟ್ ಪಡೆದು ಪಾಸ್ ಆಗಿರೋ ಕಾಣದಂತೆ ಮಾಯವಾದನು ಸಿನಿಮಾ ಇದೇ ಶುಕ್ರವಾರ ಸಿನಿ ಪ್ರೇಕ್ಷಕರ ಎದುರಿಗೆ ಬರಲಿದ್ದಾನೆ. ಗುಮ್ಮಿನೇನಿ ವಿಜಯ್ ಮ್ಯೂಸಿಕ್, ಸುಜ್ಞಾನ್ ಕ್ಯಾಮೆರಾ ಕೈಚಳಕ ಚಿತ್ರಕ್ಕಿದೆ. ಚಿತ್ರದಲ್ಲಿ ದೊಡ್ಡ ತಾರಾಬಳಗದವಿದ್ದು ಅಚ್ಯುತ್ ಕುಮಾರ್, ಭಜರಂಗಿ ಲೋಕಿ, ರಾಘವ್ ಉದಯ್ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ.