ಹಿರಿಯ ನಟ ಲೋಹಿತಾಶ್ವ ವಿಧಿವಶ

Public TV
1 Min Read
LOHITHASHWA 1

ನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ(80) ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಸಾಗರ್ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

lohitjhashwa

ಲೋಹಿತಾಶ್ವ ಅವರು ತುಮಕೂರಿನ ತೊಂಡಗೆರೆ ಗ್ರಾಮದವರಾಗಿದ್ದು, ಅಲ್ಲಿಯೇ  ಅಂತ್ಯಕ್ರಿಯೆ ನಡೆಯಲಿದೆ.

ಸಾಕಷ್ಟು ಭಿನ್ನ ಪಾತ್ರಗಳ ಮೂಲಕ ಮನಗೆದ್ದ ನಟ ಲೋಹಿತಾಶ್ವ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸುಮಾರು ಒಂದು ತಿಂಗಳ ಕಾಲ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಕನ್ನಡದ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಲೋಹಿತಾಶ್ವ ಅವರು ನಟಿಸಿದ್ದಾರೆ. ಚಿಕ್ಕ ವಯಸ್ಸಿನಿಂದಲೂ ಅವರಿಗೆ ನಟನೆಯಲ್ಲಿ ಆಸಕ್ತಿ ಇತ್ತು. ವಿದ್ಯಾರ್ಥಿ ಆಗಿದ್ದಾಗಿನಿಂದಲೇ ರಂಗಭೂಮಿಯಲ್ಲಿ ತೊಡಗಿಕೊಂಡಿದ್ದರು. ಚಿತ್ರರಂಗದಲ್ಲಿ ಪೋಷಕ ಪಾತ್ರಗಳಲ್ಲಿ ಅವರು ತುಂಬ ಫೇಮಸ್ ಆಗಿದ್ದರು.

ಪ್ರಸಿದ್ಧ ನಟರ ಜೊತೆ ತೆರೆ ಹಂಚಿಕೊಂಡಿದ್ದ ಇವರು ವಿಲನ್ ಆಗಿಯೂ ನಟಿಸಿ ಗಮನ ಸೆಳೆದಿದ್ದರು.  ಅವರ ಮಗ ಶರತ್‌ ಲೋಹಿತಾಶ್ವ ಕೂಡ ನಟನಾಗಿ ಸೈ ಎನಿಸಿಕೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article