ಕನ್ನಡದ ನಟಿ ಪ್ರಿಯಾಂಕಾ ಉಪೇಂದ್ರ (Priyanka Upendra) ಅವರು ಹಲವು ವರ್ಷಗಳ ಬಳಿಕ ಬಾಲಿವುಡ್‌ನತ್ತ ಮುಖ ಮಾಡಿದ್ದಾರೆ. ‘ಸೆಪ್ಟೆಂಬರ್ 21’ ಹೆಸರಿನ ಸಿನಿಮಾದಲ್ಲಿ ಪ್ರಿಯಾಂಕಾ ನಟಿಸಿದ್ದಾರೆ. ಇದನ್ನೂ ಓದಿ:ಸಿಂಧೂರ ಕೇವಲ ಸಂಪ್ರದಾಯವಲ್ಲ, ಅದು ಸಂಕೇತ- ಭಾರತೀಯ ಸೇನೆ ಕೊಂಡಾಡಿದ ಮೋಹನ್ ಲಾಲ್
ಮಂಗಳೂರಿನ ಯುವ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ‘ಸೆಪ್ಟೆಂಬರ್ 21’ ಸಿನಿಮಾದಲ್ಲಿ ಪ್ರಿಯಾಂಕಾ ಕೂಡ ಪವರ್‌ಫುಲ್ ಪಾತ್ರದಲ್ಲಿ ನಟಿಸಿದ್ದಾರೆ. ಕಮಲಾ ಹೆಸರಿನ ಕೇರ್ ಟೇಕರ್ ಪಾತ್ರದಲ್ಲಿ ಉಪೇಂದ್ರ ಪತ್ನಿ ನಟಿಸಿದ್ದಾರೆ. ಇದನ್ನೂ ಓದಿ:ಯೋಧರ ಹೋರಾಟ ಶುರುವಾಗಿದೆ: ‘ಆಪರೇಷನ್ ಸಿಂಧೂರ’ಗೆ ಜೈ ಎಂದ ತಲೈವಾ
ಖಿನ್ನತೆ ಮತ್ತು ಸ್ಮರಣಶಕ್ತಿ ಕಳೆದುಕೊಂಡ 60 ವರ್ಷದ ವ್ಯಕ್ತಿಯ ಪಾತ್ರದಲ್ಲಿ ಪ್ರವೀಣ್ ಸಿಂಗ್ ಸಿಸೋಡಿಯಾ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಾಗ ಆರೈಕೆ ಮಾಡುವ ಕೇರ್ ಟೇಕರ್ ಆಗಿ ಪ್ರಿಯಾಂಕಾ ಕಾಣಿಸಿಕೊಂಡಿದ್ದಾರೆ.
‘ಸೆಪ್ಟೆಂಬರ್ 21’ ಚಿತ್ರವನ್ನು ಮಲಯಾಳಂ ಬರಹಗಾರ ನೆಲ್ಲೂಲಿ ಪಿ ರಾಜಶೇಖರನ್ ಬರೆದಿದ್ದಾರೆ. ಕನ್ನಡಿಗ ವಿನಯ್ ಚಂದ್ರ ಸಂಗೀತ ನೀಡಿದರೆ, ಅನಿಲ್ ಕುಮಾರ್ ಕೆ ಅವರ ಛಾಯಾಗ್ರಹಣವಿದೆ. ಈ ಚಿತ್ರದಲ್ಲಿ ಬಾಲಿವುಡ್ ನಟಿ ಆಯೇಷಾ ಐಮೆನ್, ನೆಲ್ಲೂಲಿ ಪಿ ರಾಜಶೇಖರನ್ ಮತ್ತು ರಿಕಿ ರುದ್ರ ನಟಿಸಿದ್ದಾರೆ. ಜೊತೆಗೆ ನಾನಾ ಪಾಟೇಕರ್ ಅವರ ಸೋದರಳಿಯ ಸಚಿನ್ ಪಾಟೇಕರ್ ಕೂಡ ನಟಿಸಿದ್ದಾರೆ.
ಈ ಹಿಂದೆ ಸೌತೇಲಾ, ದುರ್ಗಾ, ಎನಿಮಿ ಹಿಂದಿ ಚಿತ್ರಗಳಲ್ಲಿ ಪ್ರಿಯಾಂಕಾ ಉಪೇಂದ್ರ ನಟಿಸಿದ್ದರು. ಈಗ ಮತ್ತೆ ಬಾಲಿವುಡ್‌ನಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.