ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ ಎಂದು ಕಮಲ್ ಹಾಸನ್ (Kamal Haasan) ಕನ್ನಡ ಕಾಂಟ್ರವರ್ಸಿಗೆ ರಚಿತಾ ರಾಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮಿಳಿನಿಂದ ಕನ್ನಡ ಎಂದು ಹೇಳಿಕೆ ನೀಡಿದ್ದಲ್ಲದೇ ಕ್ಷಮೆ ಕೇಳಲ್ಲ ಎಂದು ಪಟ್ಟು ಹಿಡಿದ ಕಮಲ್ ಹಾಸನ್‌ಗೆ ರಚಿತಾ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ:ಹೃತಿಕ್ ರೋಷನ್‌ಗೆ ಪೃಥ್ವಿರಾಜ್ ಸುಕುಮಾರನ್ ಆ್ಯಕ್ಷನ್ ಕಟ್?


View this post on Instagram
ದೊಡ್ಡವರೆಲ್ಲ ಜಾಣರಲ್ಲ ಚಿಕ್ಕವರೆಲ್ಲ ಕೋಣರಲ್ಲ ಎಂದು ತಮಿಳು ನಟನಿಗೆ ರಚಿತಾ ಟಾಂಗ್ ಕೊಟ್ಟಿದ್ದಾರೆ. ಚಿಕ್ಕವರು ತಪ್ಪು ಮಾಡಿದಾಕ್ಷಣ ಕ್ಷಮೆ ಕೇಳೋವರೆಗೂ ದೊಡ್ಡವರು ಬಿಡಲ್ಲ. ಅದೇ ದೊಡ್ಡವರು ತಪ್ಪು ಮಾಡಿದ್ರೆ ಏನು ಮಾಡಬೇಕು. ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ. ಕನ್ನಡವನ್ನು ತಪ್ಪು ಮಾತನಾಡುವವರನ್ನು ನಾವು ತಿದ್ದಿ ಕಲಿಸುತ್ತೇವೆ. ಕನ್ನಡ ಭಾಷೆಯ ಬಗ್ಗೆ ತಪ್ಪಾಗಿ ಮಾತನಾಡಿರುವರನ್ನು ಏನು ಅಂತ ಹೇಳೋಣ ಎಂದು ನಟಿ ಪ್ರಶ್ನಿಸಿದ್ದಾರೆ. ಈಗ ನಮ್ಮ ಭಾಷೆಯ ಮೇಲಿರುವಂತಹ ಗೌರವ ಪ್ರೀತಿಯನ್ನು ತಿಳಿಸೋಣ ಏನ್ ಹೇಳ್ತೀರಾ ಎಂದಿದ್ದಾರೆ. ಈ ಮೂಲಕ ಕಮಲ್ ಹಾಸನ್ ಹೇಳಿಕೆ ತಪ್ಪು. ಕ್ಷಮೆಯಾಚಿಸಬೇಕು ಎಂದಿದ್ದಾರೆ ರಚಿತಾ.

ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ. ಕಾನೂನು ಹಾಗೂ ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ ಎಂದು ಹೇಳಿದ್ದಾರೆ.
ತಮಿಳು ಭಾಷೆಯಿಂದ ಕನ್ನಡ ಹುಟ್ಟಿದ್ದು ಎಂಬ ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ತಮ್ಮ ನಟನೆಯ ಥಗ್ ಲೈಫ್ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಕನ್ನಡದ ಹಿರಿಯ ನಟ ಶಿವರಾಜ್‌ಕುಮಾರ್ ಅವರ ಎದುರೇ ಕಮಲ್ ಹಾಸನ್ ಈ ಹೇಳಿಕೆ ನೀಡಿದ್ದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ಕಮಲ್ ಹಾಸನ್ ಹೇಳಿಕೆ ಶುದ್ಧ ಸುಳ್ಳು. ಭಾಷಾ ಪ್ರಾವಿಣ್ಯತೆ ಇಲ್ಲದೇ ಈ ರೀತಿಯ ಉದ್ಧಟತನದ ಹೇಳಿಕೆ ನೀಡುವುದು ಸರಿಯಲ್ಲ ಎಂದು ಭಾಷಾ ವಿಜ್ಞಾನಿಗಳು ಖಂಡಿಸಿದ್ದಾರೆ. ನಟನ ಹೇಳಿಕೆಗೆ ಕನ್ನಡಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಕೂಡಲೇ ಕನ್ನಡಿಗರ ಕ್ಷಮೆಯಾಚಿಸಿ, ಇಲ್ಲದಿದ್ದರೆ ನಿಮ್ಮ ಸಿನಿಮಾವನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡಲಾಗುವುದು ಎಂದು ಹೋರಾಟಗಾರರು ನಟನಿಗೆ ಎಚ್ಚರಿಕೆ ನೀಡಿದ್ದಾರೆ.


