ಬೆಂಗಳೂರು: ನಟಿ ರನ್ಯಾ ರಾವ್ (Ranya Rao) ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ನಮಗೆ ಯಾವುದೇ ಮಾಹಿತಿ ಕೊಟ್ಟಿಲ್ಲ ಅಂತಾ ಗೃಹ ಸಚಿವ ಪರಮೇಶ್ವರ್ (Parameshwar) ಹೇಳಿದ್ದಾರೆ.
ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಕಂದಾಯ ಗುಪ್ತಚರ ನಿರ್ದೇಶನಾಲಯ(DRI) ಅವರು ಚಿನ್ನದ ಕಳ್ಳ ಸಾಗಾಣಿಕೆ (Gold Smuggling Case) ತನಿಖೆ ಮಾಡುತ್ತಿರುವ ಬಗ್ಗೆ ವರದಿ ಬರುತ್ತಿದೆ. ನಮ್ಮ ಡಿಜಿಪಿ ಅವರ ಮಗಳು ಭಾಗಿಯಾಗಿದ್ದಾರೆ ಎಂದು ವರದಿ ಬಂದಿದೆ. ಅದರ ಬಗ್ಗೆ ಡಿಆರ್‌ಐ ಅವರು ಪೂರ್ಣ ಪ್ರಮಾಣದಲ್ಲಿ ತನಿಖೆ ಮಾಡುವ ತನಕ ನಮಗೆ ಯಾವುದೇ ಮಾಹಿತಿ ನೀಡಲ್ಲ. ಹಾಗಾಗಿ ಡಿಆರ್‌ಐ ಅವರು ಯಾವುದೇ ಮಾಹಿತಿ ನಮಗೆ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: 40 ಬಾರಿ ದುಬೈಗೆ ಹೋಗಿದ್ದ ರನ್ಯಾ ಅಧಿಕಾರಿಗಳ ಬಲೆಗೆ ಬಿದ್ದಿದ್ದೆ ರೋಚಕ
Advertisement
Advertisement
ನಮ್ಮ ಪೊಲೀಸ್ ಅವರು ತೆಗೆದುಕೊಂಡ ಮಾಹಿತಿ ಆಧಾರದ ಮೇಲೆ ಮಾತನಾಡುತ್ತಿದ್ದೇನೆ. ಪ್ರಕರಣದ ತನಿಖೆ ಆದ ಬಳಿಕ ನಾವು ಪ್ರತಿಕ್ರಿಯೆ ಕೊಡಬಹುದು ಎಂದು ಹೇಳಿದರು.