ಕನ್ನಡದ ನಟಿ ರುಕ್ಮಿಣಿ ವಸಂತ್‌ಗೆ (Rukmini Vasanth) ಸೌತ್‌ನಲ್ಲಿ ಬೇಡಿಕೆ ಹೆಚ್ಚಾಗಿದೆ. ಸದ್ಯ ಕನ್ನಡ ಸಿನಿಮಾಗಳ ಜೊತೆ ಕಾಲಿವುಡ್‌ನಲ್ಲಿ ಬ್ಯುಸಿಯಿರುವ ಬೆಡಗಿ ಈಗ ತೆಲುಗಿನಿಂದ ಬುಲಾವ್ ಬಂದಿದೆ. ಟಾಲಿವುಡ್‌ನ ಸ್ಟಾರ್ ನಟನಿಗೆ ರುಕ್ಮಿಣಿ ವಸಂತ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ:ತಲೈವಾ ಆರೋಗ್ಯದಲ್ಲಿ ಏರುಪೇರು- ಹೆಲ್ತ್ ಅಪ್‌ಡೇಟ್ ತಿಳಿಸಿದ ಪತ್ನಿ ಲತಾ
ಸದ್ಯ ಹರಿದಾಡುತ್ತಿರುವ ಸುದ್ದಿ ಏನಪ್ಪಾ ಅಂದರೆ, ಜ್ಯೂ.ಎನ್‌ಟಿಆರ್ (Jr.Ntr) ನಟಿಸುತ್ತಿರುವ ಹೊಸ ಸಿನಿಮಾಗೆ ರುಕ್ಮಿಣಿ ವಸಂತ್ ಹೀರೋಯಿನ್ ಆಗಿ ಆಯ್ಕೆಯಾಗಿದ್ದಾರೆ ಎನ್ನಲಾದ ಸುದ್ದಿ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಚಿತ್ರವನ್ನು ಡೈರೆಕ್ಟರ್ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ.
ಇತ್ತೀಚೆಗಷ್ಟೇ ಪ್ರಶಾಂತ್ ನೀಲ್ ಮತ್ತು ತಾರಕ್ ಕಾಂಬಿನೇಷನ್‌ನ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ. ಈ ಚಿತ್ರಕ್ಕೆ ಕನ್ನಡದ ನಟಿಗೆ ಮಣೆ ಹಾಕಿದೆ ಎನ್ನಲಾಗಿದೆ. ಈ ವಿಚಾರ ಅದೆಷ್ಟರ ಮಟ್ಟಿಗೆ ಸತ್ಯ ಎಂಬುದನ್ನು ಚಿತ್ರತಂಡ ಅಧಿಕೃತವಾಗಿ ತಿಳಿಸುವವರೆಗೂ ಕಾದುನೋಡಬೇಕಿದೆ.
ಅಂದಹಾಗೆ, ಶ್ರೀಮುರಳಿ ಜೊತೆ ಬಘೀರ, ಶಿವಣ್ಣ ಜೊತೆ ಭೈರತಿ ರಣ್‌ಗಲ್, ವಿಜಯ್ ಸೇತುಪತಿ ಜೊತೆಗಿನ ಸಿನಿಮಾ, ಶಿವಕಾರ್ತಿಕೇಯನ್ ಜೊತೆಗಿನ ಹೊಸ ಚಿತ್ರ ಸೇರಿದಂತೆ ಹಲವು ಸಿನಿಮಾಗಳು ಅವರ ಕೈಯಲ್ಲಿವೆ.