ಬೆಂಗಳೂರು: ಸದ್ಯಕ್ಕೆ ಕರ್ನಾಟಕ ಬಂದ್ ಮುಂದೂಡಿದ್ದೇವೆ. ಲಾಕ್‍ಡೌನ್ ಇಲ್ಲದಿದ್ದರೆ ಜನವರಿ 22ಕ್ಕೆ ದೊಡ್ಡ ಮಟ್ಟದ ಹೋರಾಟ ಮಾಡಲು ತೀರ್ಮಾನಿಸಲಾಗಿತ್ತು. ಇಂದಿನ ಕನ್ನಡ ಸಂಘಟನೆಗಳ ಸಭೆಯ ನಿರ್ಣಯದಂತೆ ಬಂದ್ ಬದಲು ಮೆರವಣಿಗೆ ಮಾಡುತ್ತೇವೆ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.
Advertisement
ಕೆಲ ದಿನಗಳ ಹಿಂದಷ್ಟೇ ರಾಜ್ಯ ಬಂದ್ ಹಿಂಪಡೆದ ಬಳಿಕ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚೆ ಮಾಡಲು ಕನ್ನಡ ಪರ ಹೋರಾಟಗಾರರ ಸಭೆ ಕರೆಯಲಾಗಿತ್ತು. ಕನ್ನಡ ಒಕ್ಕೂಟದ ರಾಜ್ಯಾದ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವುಡ್‍ಲ್ಯಾಂಡ್ಸ್ ಹೊಟೇಲ್‍ನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಾಟಳ್ ನಾಗರಾಜ್ ಮಾತನಾಡಿ, ಕೊರೊನಾ ಮತ್ತು ಸರ್ಕಾರದ ಟಫ್ ರೂಲ್ಸ್ ಜಾರಿ ಹಿನ್ನೆಲೆ, ಜ.22 ರಂದು ಕರೆ ನೀಡಿದ್ದ ರಾಜ್ಯ ಬಂದ್ ಹಿಂಪಡೆದಿದ್ದೇವೆ. ಮುಂದಿನ ದಿನದಲ್ಲಿ ಲಾಕ್ ಡೌನ್ ಇಲ್ಲದಿದ್ದರೆ ಜ. 22 ರಂದೇ ಬೆಂಗಳೂರಲ್ಲಿ ಹಿಂದೆಂದು ನಡೆಯದ ರೀತಿಯಲ್ಲಿ ದೊಡ್ಡ ಹೋರಾಟ ಮಾಡುತ್ತೇವೆ ಎಂದರು. ಇದನ್ನೂ ಓದಿ: ಭದ್ರತಾ ಲೋಪ – ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ ಎಂದ ಮೋದಿ
Advertisement
Advertisement
ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ ಹೋರಾಟದ ಕುರಿತು ಒಗ್ಗೂಡಿಸುತ್ತೇವೆ. 22ರ ಶನಿವಾರ ಬೆಳಗ್ಗೆ 10 ಗಂಟೆಗೆ ಟೌನ್‍ಹಾಲ್‍ನಿಂದ ಬೃಹತ್ ಮೆರವಣಿಗೆ ಆರಂಭವಾಗುತ್ತದೆ, ಮೇಕೆದಾಟು, ಮಹದಾಯಿ, ಎಂಇಎಸ್ ಮೂರು ವಿಚಾರಗಳನ್ನು ಇಟ್ಟುಕೊಂಡು ಹೋರಾಟ ಮಾಡುತ್ತೇವೆ. ಟೌನ್‍ಹಾಲ್‍ನಿಂದ ಸ್ವಾತಂತ್ರ್ಯ ಉದ್ಯಾನವನದ ವರೆಗೆ ದೊಡ್ಡ ಮೆರವಣಿಗೆ ಮಾಡುತ್ತೇವೆ. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನೆಡೆಸುವಂತೆ ಸಂಘಟನೆಗಳಿಗೆ ಕರೆ ನೀಡುತ್ತೇವೆ ಎಂದರು. ಇದನ್ನೂ ಓದಿ: ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ – ಕಾರ್ಯಕ್ರಮ ರದ್ದು
Advertisement
ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಯ ಮುಖಂಡರು ಭಾಗಿಯಾಗಿದ್ದರು.