ಬೆಂಗಳೂರು: ರಾಜರಥ ನೋಡದೇ ಇರೋರು ಕಚಡಾ ನನ್ಮಕ್ಳು ಎಂದಿದ್ದ ನಿರ್ದೇಶಕ ಅನೂಪ್ ಭಂಡಾರಿ ಈಗ ಕ್ಷಮೆ ಕೇಳಿದ್ದಾರೆ.
ರಾಜರಥ ಸಿನಿಮಾದ ಸಂಬಂಧ ಮಹಿಳಾ ರೇಡಿಯೋ ಜಾಕಿಯೊಬ್ಬರು ನಡೆಸಿದ ಕಾರ್ಯಕ್ರಮದಲ್ಲಿ ನಿರ್ದೇಶಕ ಅನೂಪ್ ಭಂಡಾರಿ, ನಾಯಕ ನಿರೂಪ್ ಭಂಡಾರಿ ಮತ್ತು ಚಿತ್ರದ ನಾಯಕಿ ಅವಾಂತಿಕಾ ಶೆಟ್ಟಿ ಭಾಗಿಯಾಗಿದ್ದರು. ಈ ವೇಳೆ ರಾಜರಥ ಸಿನಿಮಾ ನೋಡದವರು “ಕಚಡ ನನ್ ಮಕ್ಳು” ಎಂದು ಮೂವರು ಹೇಳಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿದೆ.
Advertisement
ರಂಗಿತರಂಗ ಸಿನಿಮಾ ನಿರ್ದೇಶಿಸಿದ ಬಳಿಕ ಅನೂಪ್ ಭಂಡಾರಿ ರಾಜರಥವನ್ನು ನಿರ್ಮಿಸಿದ್ದರು. ಈ ಸಿನಿಮಾ ಎರಡು ವಾರಗಳ ಹಿಂದೆ ಬಿಡುಗಡೆಯಾಗಿತ್ತು. ಆದರೆ ‘ರಂಗಿತರಂಗ’ ರೇಂಜ್ ಗೆ ಈ ಸಿನಿಮಾ ಇಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಆದರೆ ಈಗ ‘ರಾಜರಥ’ ಸಿನಿಮಾ ನೋಡದ ಪ್ರೇಕ್ಷಕರಿಗೆ ಅಣ್ಣ-ತಮ್ಮ ಇಬ್ಬರೂ “ಕಚಡ ನನ್ ಮಕ್ಳು” ಎಂದು ಬೈದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಭಾರೀ ಟೀಕೆ ವ್ಯಕ್ತವಾಗಿದೆ.
Advertisement
Advertisement
ಭಂಡಾರಿ ಸಹೋದರರು ಹೇಳಿದ್ದು ಏನು?
ಸಂದರ್ಶನದ ನಡುವೆ ನಿರೂಪಕಿ “ರಾಜರಥ ಸಿನಿಮಾ ನೋಡದ ಪ್ರೇಕ್ಷಕರು______” ಎಂದು ಬಿಟ್ಟ ಸ್ಥಳವನ್ನು ತುಂಬಿಸುವಂತೆ ಕೇಳುತ್ತಾರೆ. ಮೊದಲು ಉತ್ತರಿಸಿದ ಅನೂಪ್ ಭಂಡಾರಿ ರಾಜರಥ ಸಿನಿಮಾ ನೋಡದ ಪ್ರೇಕ್ಷಕರು “ಕಚಡ ನನ್ ಮಕ್ಳು” ಎಂದು ಹೇಳುತ್ತಾರೆ. ನಂತರ ಆ ಪ್ರಶ್ನೆ ನಟಿ ಅವಾಂತಿಕಾ ಶೆಟ್ಟಿಗೆ ಹೋಗುತ್ತದೆ. ಅವರೂ ಸಹ ಅನೂಪ್ ಅವರ ಉತ್ತರವನ್ನೇ ಮತ್ತೆ ಹೇಳುತ್ತಾರೆ. ಕೊನೆಗೆ ನಿರೂಪ್ ಭಂಡಾರಿ ಕೂಡ ರಾಜರಥ ಸಿನಿಮಾ ನೋಡದ ಪ್ರೇಕ್ಷಕರು “ಕಚಡ ಮಾತ್ರವಲ್ಲ ಲೋಫರ್ ನನ್ ಮಕ್ಳು” ಎಂದು ಹೇಳಿದ್ದಾರೆ.
Advertisement
ಕ್ಷಮೆ ಕೇಳಿದ ಅನೂಪ್ ಭಂಡಾರಿ:
ರಾಜರಥ ಚಿತ್ರದ ಬಿಡುಗಡೆಗೆ ಮುನ್ನ ಭಾಗವಹಿಸಿದ ಒಂದು ಹಾಸ್ಯಮಯ ಕಾರ್ಯಕ್ರಮದ ಸಣ್ಣ ತುಣುಕು ನಿಮ್ಮೆಲ್ಲರಿಗು ನೋವುಂಟು ಮಾಡಿರುವುದಕ್ಕೆ ಕ್ಷಮೆ ಯಾಚಿಸುತ್ತೇವೆ. ಸಂದರ್ಶನಕ್ಕು ಮುನ್ನ, ಹಲವರು ಕನ್ನಡ ಸಿನಿಮಾ ನೋಡುವುದಿಲ್ಲ, ಹಲವಾರು ಒಳ್ಳೆ ಚಿತ್ರಗಳು ಬರುತ್ತಿವೆ ಆದರು ಏಕೆ ಹೀಗೆ, ಎಂದು ಚರ್ಚಿಸಿದ್ದೆವು. ಹಾಗೆ ಸಂದರ್ಶನದಲ್ಲಿ ಬಂದ ಪ್ರಶ್ನೆಗೆ ಆ ಹಿನ್ನೆಲೆಯಲ್ಲಿ ಕೊಟ್ಟ ತಪ್ಪು ಉತ್ತರವದು. ಇದು ಖಂಡಿತವಾಗಿಯು ಕನ್ನಡ ಪ್ರೇಕ್ಷಕರನ್ನುದ್ದೇಶಿಸಿ ಹೇಳಿದ ಮಾತಲ್ಲ. ನಾವು ಏನೇ ಯಶಸ್ಸು ಕಂಡಿದ್ದರೂ ಅದಕ್ಕೆ ಪ್ರೇಕ್ಷಕರೇ ಕಾರಣ. ನಮ್ಮ ಯಾವುದೇ ಬೇರೆ ಸಂದರ್ಶನಗಳನ್ನು ನೋಡಿದರೂ ನಮ್ಮ ಗೆಲುವಿಗೆ ಪ್ರೇಕ್ಷಕರೆ ಕಾರಣ ಎಂದು ಹಲವು ಬಾರಿ ಹೇಳಿದ್ದೇವೆ. ಕನ್ನಡ ಮತ್ತು ಕನ್ನಡ ಸಿನಿಮಾದ ಬಗ್ಗೆ ನಮಗೆ ಅಪಾರ ಅಭಿಮಾನ, ಅದಕ್ಕಾಗಿಯೇ ಪ್ರತಿ ಹಾಡಿನಲ್ಲೂ ಅಚ್ಚ ಕನ್ನಡವನ್ನೇ ಬಳಸುತ್ತೇವೆ. ಕಾರ್ಯಕ್ರಮದಲ್ಲಿ ತಪ್ಪಾಗಿ ಆಡಿದ ಮಾತುಗಳನ್ನು ದಯವಿಟ್ಟು ಮನ್ನಿಸಿ. ಯಾರಿಗೂ ನೋವುಂಟು ಮಾಡಬೇಕು ಅನ್ನುವ ಉದ್ದೇಶ ನಮ್ಮದಲ್ಲ. ನಿಮ್ಮ ಆಶಿರ್ವಾದ ನಮ್ಮ ಮೇಲೆ ಸದಾ ಇರಲಿ ಎಂದು ಬರೆದು ತನ್ನ ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
https://twitter.com/anupsbhandari/status/980852507319574528