ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರು ನಿರ್ದೇಶಕರಾಗಿ 50 ವರ್ಷ ಪೂರ್ಣಗೊಂಡ ಹಿನ್ನೆಲೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಎಸ್.ವಿ.ಆರ್ 50 ಸಾಧನೆ.. ಸಂಭ್ರಮ ಕಾರ್ಯಕ್ರಮ ಉದ್ಘಾಟನೆ ಮಾಡಲಾಯ್ತು. ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಕಾರ್ಯಕ್ರಮ ಉದ್ಘಾಟನೆಯಾಗಿದ್ದು, ಅ.23 ರಿಂದ 27 ರವರೆಗೆ 5 ದಿನಗಳ ಕಾಲ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಸಿನಿಮಾಗಳ ಪ್ರದರ್ಶನ ಸಂವಾದ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದ ಉದ್ಘಾಟನೆಯಲ್ಲಿ ನಟ ಕಿಚ್ಚ ಸುದೀಪ್, ಗಿರೀಶ್ ಕಾಸರವಳ್ಳಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಶಾಸಕ ಅಶ್ವತ್ಥ್ ನಾರಾಯಣ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ಶಾಸಕ ಮುನಿರತ್ನ ಭಾಗಿಯಾಗಿದ್ದರು. ಉಳಿದಂತೆ ಈ ಸಮಾರಂಭಕ್ಕೆ ಗಿರಿಜಾ ಲೊಕೇಶ್, ಸಂಗೀತ ನಿರ್ದೇಶಕ ಹಂಸಲೇಖ, ನಾಗತಿಹಳ್ಳಿ ಚಂದ್ರಶೇಖರ್, ಶ್ರೀನಾಥ್ ಹಾಗೂ ರಾಜೇಂದ್ರ ಸಿಂಗ್ ಬಾಬು ಕುಟುಂಬಸ್ಥರು, ಆಪ್ತರು ಸೇರಿ ಇಡೀ ಚಿತ್ರರಂಗದ ಗಣ್ಯರು ಭಾಗಿಯಾಗಿದ್ದರು. ಇದನ್ನೂ ಓದಿ: ತೆಲುಗಿನ ಸೈಕಲ್ ರಾಜಕಾರಣಿ ಗುಮ್ಮಡಿ ನರಸಯ್ಯನಾದ ಶಿವಣ್ಣ
ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಹಾಗೂ ಅವರ ಇಡೀ ಕುಟುಂಬ ಸಿನಿಮಾ ರಂಗಕ್ಕೆ ನೀಡಿದ ಅಪಾರ ಕೊಡುಗೆ ಬಗ್ಗೆ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು ಮಾತಾಡಿದ್ದಾರೆ. ಪ್ರತಿ ವರ್ಷವೂ ಚಿತ್ರರಂಗದಲ್ಲಿ ಸಾಧನೆ ಮಾಡಿದ ಒಬ್ಬೊಬ್ಬ ನಿರ್ದೇಶಕರನ್ನ, ತಂತ್ರಜ್ಞರನ್ನ ಗುರುತಿಸಿ ಗೌರವಿಸುವ ಕಾರ್ಯ ನಿರಂತರವಾಗಿ ನಡೆಯಲಿದೆಯಂತೆ.

