ಬೆಂಗಳೂರು: ತಮಿಳುನಾಡಿನಲ್ಲಿ ಕನ್ನಡ ಚಿತ್ರಗಳ ಪ್ರದರ್ಶನವನ್ನ ರದ್ದು ಮಾಡಲಾಗಿದೆ. ಕಾವೇರಿ ವಿಚಾರದಲ್ಲಿ ಕನ್ನಡ ವಿರೋಧಿ ಹೇಳಿಕೆ ನೀಡಿದ್ದ ನಟ ಕಟ್ಟಪ್ಪ ಅಲಿಯಾಸ್ ಸತ್ಯರಾಜ್ ಕನ್ನಡ ಕ್ಷಮೆಯಾಚಿಸಿದ ಬೆನ್ನಲ್ಲೇ ಚೆನ್ನೈನ ಮಾಲ್‍ಗಳಲ್ಲಿ ಕನ್ನಡ ಚಿತ್ರಗಳ ಪ್ರದರ್ಶನ ಸ್ಥಗಿತಗೊಳಿಸಲಾಗಿದೆ.
Advertisement
ಶುದ್ದಿ, ಚಕ್ರವರ್ತಿ ಚಿತ್ರ ಪದರ್ಶನಗಳ ರದ್ದು ಮಾಡಲಾಗಿದ್ದು, ಜನರು ಬುಕ್ ಮಾಡಿದ್ದ ಟಿಕೆಟ್‍ಗಳನ್ನೂ ಸಹ ಕ್ಯಾನ್ಸಲ್ ಮಾಡಲಾಗಿದೆ.
Advertisement
ಈ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾರಾ ಗೋವಿಂದು, ತಮಿಳುನಾಡಿನಲ್ಲಿ ಕನ್ನಡ ಚಿತ್ರ ಪ್ರದರ್ಶನ ರದ್ದು ಮಾಡಿದ್ರೆ, ಕರ್ನಾಟಕದಲ್ಲೂ ತಮಿಳು ಚಿತ್ರ ಪ್ರದರ್ಶನ ರದ್ದು ಮಾಡಲಾಗುವುದು ಅಂತಾ ಹೇಳಿದ್ದಾರೆ. ಈ ನಡುವೆ ಕಟ್ಟಪ್ಪ ವಿಷಾದ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಾಹುಬಲಿ ಸಿನಿಮಾ ಬಿಡುಗಡೆ ಬಗ್ಗೆ ಕನ್ನಡ ಪರ ಸಂಘಟನೆಗಳು ಇಂದು ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.
Advertisement
ಇದನ್ನೂ ಓದಿ: ಸತ್ಯರಾಜ್ ಮೇಲಿನ ಸಿಟ್ಟನ್ನು ಬಾಹುಬಲಿ ಚಿತ್ರದ ಮೇಲೆ ತೋರಿಸಬೇಡಿ: ಕನ್ನಡಿಗರಲ್ಲಿ ರಾಜಮೌಳಿ ಮನವಿ
Advertisement
ನಡೆದಿದ್ದೇನು?: ಬಾಹುಬಲಿ ಚಿತ್ರದಲ್ಲಿ ಕಟ್ಟಪ್ಪನ ಪಾತ್ರದಲ್ಲಿ ಅಭಿನಯಿಸಿದ್ದ ಸತ್ಯರಾಜ್ ಕನ್ನಡಿಗರ ಬಗ್ಗೆ ಮಾತನಾಡಿದ್ದ ವೀಡಿಯೋ ವೈರಲ್ ಆಗಿತ್ತು. ಹೀಗಾಗಿ ಬಾಹುಬಲಿ-2 ಚಿತ್ರ ಬಿಡುಗಡೆಗೂ ಮುನ್ನ ಸತ್ಯರಾಜ್ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲವೆಂದಲ್ಲಿ ಕರ್ನಾಟಕದಲ್ಲಿ ಚಿತ್ರ ಬಿಡುಗಡೆಗೆ ಅಡ್ಡಿ ಮಾಡುವ ಎಚ್ಚರಿಕೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಚಿತ್ರದ ನಿದೇರ್ಶಕ ರಾಜಮೌಲಿ ಪ್ರತಿಕ್ರಿಯಿಸಿ, ನನಗೆ ಯಾವುದೇ ವಿಚಾರ ಗೊತ್ತಿಲ್ಲ ಎಂದಿದ್ದರು. ಇದರಿಂದ ಕನ್ನಡಪರ ಹೋರಾಟಗಾರರು ಮತ್ತಷ್ಟು ಕೆರಳಿದ್ದರು. ಕೊನೆಗೆ ಕನ್ನಡಿಗರ ಮನವೊಲಿಕೆಗೆ ನಿರ್ದೇಶಕ ರಾಜಮೌಳಿ ಯತ್ನಿಸಿದ್ದರು. ಅಂತೆಯೇ ಶುಕ್ರವಾರ ಸತ್ಯರಾಜ್ ಕೂಡ ಕನ್ನಡಿಗರ ಕ್ಷಮೆ ಕೇಳಿದ್ದರು. ಇದ್ರಿಂದ ಕುಪಿತಗೊಂಡ ತಮಿಳು ಚಿತ್ರೋದ್ಯಮ, ಕನ್ನಡದ ಮೇಲೆ ಕೋಪ ತೀರಿಸಿಕೊಳ್ಳಲು ನಿನ್ನೆ ಸಂಜೆಯಿಂದಲೇ ಕನ್ನಡ ಚಿತ್ರ ಪ್ರದರ್ಶನಗಳ ಏಕಾಏಕಿ ರದ್ದು ಮಾಡಿದೆ. ಇದೀಗ ಕರ್ನಾಟಕದಲ್ಲೂ ತಮಿಳು ಚಿತ್ರ ಪ್ರದರ್ಶನ ರದ್ದಿಗೆ ನಿರ್ಧರಿಸಲಾಗಿದೆ.
ಇದನ್ನೂ ಓದಿ: ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ಕಟ್ಟಪ್ಪ