Connect with us

Cinema

ಚಿಕ್ಕಣ್ಣ-ಮಂಜು ಮಾಂಡವ್ಯ ಜುಗಲ್‍ಬಂದಿಯ ಚಿತ್ರ ಈ ವಾರ ತೆರೆಗೆ!

Published

on

ಮಾಸ್ಟರ್ ಪೀಸ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿ ಸೈ ಎನಿಸಿಕೊಂಡಿದ್ದ ನಿರ್ದೇಶಕ ಈಗ ತಾವೇ ಕ್ಯಾಮೆರಾ ಮುಂದೆ ಬಂದು ಡೈಲಾಗ್ ಹೇಳ್ತಿದ್ದಾರೆ.

ಹೌದು, ನಿರ್ದೇಶಕ ಮಂಜು ಮಾಂಡವ್ಯ ನಿರ್ದೇಶನಕ್ಕೂ ಸೈ, ನಟನೆಗೂ ಸೈ ಎನ್ನುತ್ತಿದ್ದಾರೆ. ಶ್ರೀ ಭರತ ಬಾಹುಬಲಿ ಚಿತ್ರದ ಮೂಲಕ ನಟನಾಗಿಯೂ ಛಾಪು ತೋರಿಸಲು ಸಿದ್ದರಾಗಿದ್ದಾರೆ ಮಂಜು ಮಾಂಡವ್ಯ. ನಟನೆ ಜೊತೆಗೆ ಸ್ವತಃ ತಾವೇ ಚಿತ್ರಕ್ಕೆ ಆಕ್ಷನ್ ಕಟ್ ಕೂಡ ಹೇಳಿದ್ದಾರೆ.

ಮಂಜು ಮಾಂಡವ್ಯ, ಕಾಮಿಡಿ ಕಿಂಗ್ ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರ ಹಲವು ವಿಶೇಷತೆಗಳಿಂದ ಗಮನ ಸೆಳೆಯುತ್ತಿದೆ. ಶ್ರೀ ಭರತ ಬಾಹುಬಲಿ ಟೈಟಲ್ಲೇ ವಿಭಿನ್ನವಾಗಿದ್ದು ರೋಮ್ಯಾಂಟಿಕ್ ಕಾಮಿಡಿ ಎಲಿಮೆಂಟ್ ಚಿತ್ರದಲ್ಲಿದೆಯಂತೆ. ಚಿತ್ರದಲ್ಲಿ ನಾಯಕಿಯಾಗಿ ಸಾರಾ ಹರೀಶ್ ನಟಿಸಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಗೆಳೆಯನ ಚಿತ್ರದ ಟ್ರೈಲರ್ ರಿಲೀಸ್ ಮಾಡಿ ಶುಭ ಹಾರೈಸಿದ್ದು, ಟ್ರೈಲರ್ ಮೆಚ್ಚುಗೆ ಪಡೆದುಕೊಂಡಿದೆ. ಮಣಿಕಾಂತ್ ಕದ್ರಿ ಸಂಗೀತವಿರುವ ಚಿತ್ರದ ಹಾಡುಗಳು ಕೂಡ ಸಖತ್ ಸೌಂಡ್ ಮಾಡ್ತಿವೆ. ಜನವರಿ 17ಕ್ಕೆ ಶ್ರೀ ಭರತ ಬಾಹುಬಲಿ ಚಿತ್ರ ತೆರೆಗೆ ಬರಲು ರೆಡಿಯಾಗಿದ್ದು, ಟಿ. ಶ್ರೀನಿವಾಸ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.