ಹ್ಯಾಟ್ರಿಕ್ ಡೈರೆಕ್ಟರ್ ಎಂದೇ ಖ್ಯಾತಿ ಪಡೆದಿರುವ ನಿರ್ದೇಶಕ ಪ್ರೇಮ್ 49ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ತಮ್ಮ 49ನೇ ವರ್ಷದ ಹುಟ್ಟುಹಬ್ಬವನ್ನ ತಮ್ಮ ಕುಟುಂಬ ಹಾಗೂ ಆಪ್ತ ಬಳಗದ ಜೊತೆ ಆಚರಿಸಿಕೊಂಡಿದ್ದಾರೆ. ಕೇಕ್ ಕತ್ತರಿಸಿ, ದೀಪಾವಳಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಒಂದು ಕಡೆ ಹುಟ್ಟುಹಬ್ಬ ಹಾಗೂ ದೀಪಾವಳಿ ಸಂಭ್ರಮವನ್ನ ಒಟ್ಟೊಟ್ಟಿಗೆ ಮಾಡಿದ್ದಾರೆ.
ಮಂಗಳವಾರ ರಾತ್ರಿ ಆಪ್ತರೊಡನೆ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬ ಆಚರಿಸಿಕೊಂಡ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸದ್ಯ ಕೆಡಿ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿರುವ ಪ್ರೇಮ್ ತಮ್ಮ ಅಭಿಮಾನಿಗಳಿಗೆ ಹಾಗೂ ಆಪ್ತ ವಲಯಕ್ಕೆ ಮನೆ ಬಳಿ ಬಾರದಂತೆ ಮನವಿ ಮಾಡಿಕೊಂಡಿದ್ದರು.
ಧ್ರುವ ಸರ್ಜಾ ಜೊತೆಗಿನ ಪ್ಯಾನ್ ಇಂಡಿಯಾ ಕೆಡಿ ಸಿನಿಮಾ ಟೀಸರ್ ಹಾಗೂ ಸಾಂಗ್ ಮೂಲಕ ಸದ್ದು ಮಾಡುತ್ತಿದೆ. ಈ ಸಿನಿಮಾವನ್ನ ಸದ್ಯದಲ್ಲಿಯೇ ತೆರೆಗೆ ತರುವ ನಿಟ್ಟಿನಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಇದರ ಮಧ್ಯೆ ಆಪ್ತರು ಹಾಗೂ ಕುಟುಂಬದ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

