Bengaluru CityCinemaDistrictsKarnatakaLatestMain PostSandalwood

ಹಿರಿಯ ನಿರ್ದೇಶಕ ಭಗವಾನ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

ಸ್ಯಾಂಡಲ್‌ವುಡ್‌ನ (Sandalwood) ಹಿರಿಯ ನಿರ್ದೇಶಕ ಭಗವಾನ್ (Director Bhagavan) ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್‌ವುಡ್‌ ನಟ ಮನದೀಪ್ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಹಿರಿಯ ನಿರ್ದೇಶಕ ಭಗವಾನ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

ನಟ,ನಿರ್ದೇಶಕ, ನಿರ್ಮಾಪಕನಾಗಿ ಕನ್ನಡ ಚಿತ್ರರಂಗದಲ್ಲಿ ಭಗವಾನ್ ಗುರುತಿಸಿಕೊಂಡಿದ್ದರು. ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 89 ವರ್ಷದ ಭಗವಾನ್ ಅವರು ಇತ್ತೀಚೆಗೆ ಶೀತದಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆಯಿಂದ 2 ದಿನದ ಹಿಂದೆಯೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು.  ಡಾ.ಮಂಜುನಾಥ್‌ ಅವರು ಭಗವಾನ್‌ಗೆ ಚಿಕಿತ್ಸೆ ನೀಡುತ್ತಿದ್ದಾರೆ.

1966ರಲ್ಲಿ ʻಸಂಧ್ಯಾರಾಗʼ ಸಿನಿಮಾ ಮೂಲಕ ಸಹಾಯಕ ನಿರ್ದೇಶಕರಾಗಿ ಭಗವಾನ್ ಚಿತ್ರರಂಗ ಪ್ರವೇಶಿಸಿದ್ದರು. ಬಳಿಕ ದೊರೈರಾಜ್ ಅವರ ಜೊತೆಗೂಡಿ ಸಾಕಷ್ಟು ಸಿನಿಮಾಗಳನ್ನ ನಿರ್ದೇಶನ ಮಾಡಿದ್ದರು.

Live Tv

Leave a Reply

Your email address will not be published. Required fields are marked *

Back to top button