ಬೆಂಗಳೂರು: ಎ.ಎನ್.ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಬಿ.ಎನ್.ಗಂಗಾಧರ್ ಅವರು ನಿರ್ಮಿಸಿರುವ `ಜಿಗ್ರಿ ದೋಸ್ತ್` ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಬೆಂಗಳೂರು, ದಾಂಡೇಲಿ ಮುಂತಾದ ಕಡೆ ಚಿತ್ರಕ್ಕೆ 42 ದಿನಗಳ ಕಾಲ ಚಿತ್ರೀಕರಣ ನಡೆದಿದೆ.
ಎಸ್.ಮೋಹನ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂದ ಅಶೋಕ್(ರಾಧಾರಮಣ ಖ್ಯಾತಿ), ಚೇತನ್ ಸೂರ್ಯ, ವಿನೋದ್ ಆಳ್ವಾ, ಸುಷ್ಮ, ಅಕ್ಷತ ಮುಂತಾದವರಿದ್ದಾರೆ.
Advertisement
ಇಲ್ಲಿಯವರೆಗೂ ಸಾಕಷ್ಟು ಚಿತ್ರಗಳಲ್ಲಿ ನಟಿಸಿರುವ ನಟ ವಿನೋದ್ ಆಳ್ವಾ ಅವರು ತಮ್ಮ ಯಾವುದೇ ಚಿತ್ರಕ್ಕೂ ಸ್ವತಃ ಡಬ್ಬಿಂಗ್ ಮಾಡಿಲ್ಲ. ನಮ್ಮ ಚಿತ್ರದಲ್ಲಿ ಮೊದಲ ಬಾರಿಗೆ ಅವರ ಡಬ್ಬಿಂಗ್ ಮಾಡಿದ್ದಾರೆ ಎಂದು ನಿರ್ದೇಶಕ ಮೋಹನ್ ತಿಳಿಸಿದ್ದಾರೆ.
Advertisement
ದಿನೇಶ್ ಕುಮಾರ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಪ್ರಸಾದ್ ಬಾಬು ಅವರ ಛಾಯಾಗ್ರಹಣವಿದೆ. ಶಿವಪ್ರಸಾದ್ ಸಂಕಲನ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಹಾಗೂ ಮದನ್ ಹರಿಣಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
Advertisement