Connect with us

Bengaluru City

ಈ ಹೊತ್ತಲ್ಲಿ ಕನ್ನಡ ಧ್ವಜ ವಿವಾದ ಬೇಕಿರಲಿಲ್ಲ- ಸಿಎಂ ನಿರ್ಧಾರಕ್ಕೆ ಉಸ್ತುವಾರಿ ವೇಣುಗೋಪಾಲ್ ಆಕ್ಷೇಪ

Published

on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಭೇಟಿ ಮಾಡಿ ಪ್ರತ್ಯೇಕ ಕನ್ನಡ ಧ್ವಜ ವಿಚಾರದ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ಅವರು, ಕನ್ನಡಕ್ಕೆ ಪ್ರತ್ಯೇಕ ಧ್ವಜ ವಿಚಾರವಾಗಿ ಸಿಎಂ ಜೊತೆ ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಚುನಾವಣಾ ಸಂದರ್ಭದಲ್ಲಿ ಇದು ಅಗತ್ಯ ಇರಲಿಲ್ಲ ಎಂಬ ಹೈಕಮಾಂಡ್ ಅಭಿಪ್ರಾಯವನ್ನ ಸಿಎಂಗೆ ತಿಳಿಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

ಈ ಕುರಿತು ಪಕ್ಷದ ವೇದಿಕೆಯಲ್ಲಿ ನಿರ್ಣಯ ತೆಗೆದುಕೊಳ್ಳೊಣ ಅಂತ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಹೇಳಿದ್ದಾರೆ. ಚರ್ಚೆಯ ವೇಳೆ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಭಾಗಿಯಾಗಿದ್ದರು.

ಸಿದ್ದರಾಮಯ್ಯ ಸರ್ಕಾರದ ಈ ನಿರ್ಧಾರ ಪ್ರಕಟವಾದ ಬಳಿಕ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ವಿಶೇಷವಾಗಿ ಕಾಂಗ್ರೆಸ್ ಹಿರಿಯ ನಾಯಕ ಪ್ರದೀಪ್ ಭಟ್ಟಾಚಾರ್ಯ ಅವರು ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು.

ಭಾರೀ ಚರ್ಚೆಗೆ ಗ್ರಾಸವಾಗಿರುವ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ರೂಪಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ 9 ಜನರ ಕಮಿಟಿಯನ್ನ ರಚಿಸಿ ಆದೇಶ ಹೊರಡಿಸಿತ್ತು. ನಾಡ ಧ್ವಜ ರೂಪಿಸುವ ಕಮಿಟಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಅಧ್ಯಕ್ಷರಾಗಿರುತ್ತಾರೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗೃಹ ಇಲಾಖೆ,ಕಾನೂನು ಇಲಾಖೆ ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆ ಕಾರ್ಯದರ್ಶಿಗಳು ಸದಸ್ಯರಾಗಿರುತ್ತಾರೆ. ಇದರ ಜೊತೆ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು- ಹಾಗೂ ಹಂಪಿ ಕನ್ನಡ ವಿವಿ ಕುಲಸಚಿವರು ಸದಸ್ಯರಾಗಿರುತ್ತಾರೆ. ಉಳಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಹೇಳಲಾಗಿತ್ತು.

ಇದನ್ನೂ ಓದಿ: ಪ್ರತ್ಯೇಕ ಧ್ವಜದ ಬಗ್ಗೆ ಕಾನೂನು ಪಂಡಿತರು ಏನ್ ಹೇಳ್ತಾರೆ, ಡಿವಿಎಸ್ ಹೊರಡಿಸಿದ್ದ ಸುತ್ತೋಲೆ ಏನಾಯ್ತು?

ಇದನ್ನೂ ಓದಿ: ರಾಜ್ಯ ಸರ್ಕಾರದ ವಿರುದ್ಧ ನಟ ಜಗ್ಗೇಶ್ ವಾಗ್ದಾಳಿ

Click to comment

Leave a Reply

Your email address will not be published. Required fields are marked *