-ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕೆ
ಬೆಂಗಳೂರು: ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ. ಕನ್ನಡ ನಾಡಿನ ಉದಯವಾದ ಈ ದಿನವನ್ನು ಸಡಗರದಿಂದ ಆಚರಿಸಲು ಸಕಲ ಸಿದ್ಧತೆಗಳು ನಡೆದಿದೆ. ಆದರೆ ರಾಜ್ಯದ ಬಿಜೆಪಿ ಸರ್ಕಾರ ಹೊರಡಿಸಿರುವ ಸುತ್ತೋಲೆಯೊಂದು ಹೊಸ ವಿವಾದಕ್ಕೆ ಕಾರಣವಾಗಿದೆ. ಕನ್ನಡ ರಾಜ್ಯೋತ್ಸವದಂದು ರಾಜ್ಯದ ಯಾವ ಭಾಗದಲ್ಲಿಯೂ ಕನ್ನಡ ಧ್ವಜ ಹಾರಾಟ ಬೇಡ. ಕೇವಲ ರಾಷ್ಟ್ರಧ್ವಜವನ್ನಷ್ಟೇ ಹಾರಿಸಿ ಎಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಕಡ್ಡಾಯ ಸೂಚನೆ ಹೊರಡಿಸಿದೆ.
https://twitter.com/dineshgrao/status/1189948344753246208
Advertisement
ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯ ವೇಳೆ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ರಾಷ್ಟ್ರಧ್ವಜಾರೋಹಣ ಮಾಡಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.
Advertisement
ರಾಜ್ಯ ಸರ್ಕಾರದ ಈ ಆದೇಶದ ವಿರುದ್ಧ ಕನ್ನಡ ಪರ ಸಂಘಟನೆಗಳು ಸೇರಿದಂತೆ ಸಾಮಾಜಿಕ ತಾಣಗಳಲ್ಲಿ ಸಹ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಧ್ವಜ ಸಂಹಿತೆ ಹೆಸರಿನಲ್ಲಿ ಜನ ಮಾನಸದಲ್ಲಿ ದಶಕಗಳಿಂದ ನೆಲೆಯೂರಿದ ಕನ್ನಡದ ಅಸ್ಮಿತೆಯ ಪ್ರತಿಬಿಂಬವಾದ ನಾಡಧ್ವಜ ಹಾರಾಟಕ್ಕೆ ಅವಕಾಶ ನೀಡದೇ ಇರುವ ಮೂಲಕ ಬಿಜೆಪಿ ಸರ್ಕಾರ ಕನ್ನಡಿಗರ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದೆ. ಕರ್ನಾಟಕದಲ್ಲಿ ನಾಡಧ್ವಜವಲ್ಲದೆ ಭಗವಾಧ್ವಜ ಹಾರಿಸಬೇಕೆ? ಎಂದು ಕಿಡಿ ಕಾರಿದ್ದಾರೆ.