ಬೆಳಗಾವಿ: ಕೆಎಂಎಫ್ ಹಾಲಿನ ಪ್ಯಾಕೆಟ್ ಮೇಲೆ ಕನ್ನಡವೇ ಮಾಯವಾಗಿದ್ದು, ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಹಾಲಿನ ಪ್ಯಾಕೆಟ್ ಮುದ್ರಣ ಮಾಡಲಾಗಿದೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ.
ಕಳೆದ ಕೆಲ ದಿನಗಳಿಂದ ಕೆಎಂಎಫ್ ಸರಬರಾಜು ಮಾಡುವ ಹಾಲಿನ ಪ್ಯಾಕೆಟ್ ಮೇಲೆ ಕನ್ನಡದಲ್ಲಿ ಬರೆಯಲಾಗಿದ್ದ ಅಕ್ಷರಗಳನ್ನು ತೆಗೆದು ಹಾಕಲಾಗಿದೆ. ಇದರಿಂದ ಕೆಎಂಎಫ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ. ನಂದಿನಿ ಪ್ರೊಡೆಕ್ಟ್ ಕರ್ನಾಟಕದ್ದೋ, ಅಲ್ವೋ ಎಂದು ಪ್ರಶ್ನೆ ಮಾಡಿರುವ ಕನ್ನಡಿಗರು ಕೆಎಂಎಫ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಮರನ್ನ ಮದುವೆಯಾದ್ರೆ SSK ಸಮಾಜದಿಂದ ಬಹಿಷ್ಕರಿಸಿ: ನಾಗೇಶ್
Advertisement
Advertisement
ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿರುವ ಹಾಲಿನ ಪ್ಯಾಕೆಟ್ ಮುದ್ರಣವನ್ನು ತಕ್ಷಣ ನಿಲ್ಲಿಸಿ ಕನ್ನಡ ಭಾಷೆಯಲ್ಲಿ ಮುದ್ರಣ ಮಾಡುವಂತೆ ಆಗ್ರಹಿಸಿದ್ದಾರೆ. ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಅಂದರೆ ಹಳೆಯ ಪಾಕೆಟ್ ಮೇಲೆ ಈ ಮೊದಲು ಸಂಪೂರ್ಣವಾಗಿ ಕನ್ನಡ ಭಾಷೆಯಲ್ಲಿಯೇ ನಂದಿನ ಮುದ್ರಣವಾಗಿತ್ತು. ಆದರೀಗ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮುದ್ರಣವಾಗಿರುವುದರಿಂದ ನಾಡಿನ ಜನರಿಗೆ ಆಕ್ರೋಶ ತರಿಸಿದೆ. ಇದನ್ನೂ ಓದಿ: ಬಿಜೆಪಿಯಲ್ಲೇ ಆರಗ ಜ್ಞಾನೇಂದ್ರ ವಿರುದ್ಧ ಅಪಸ್ವರ- ಬದಲಾಗುತ್ತಾ ಸಚಿವರ ಖಾತೆ..?