– ರಾಜ್ಯದ ಎಲ್ಲ ಗ್ರಾ.ಪಂಗಳಲ್ಲಿ ಹಂತಹಂತವಾಗಿ ಕೆಪಿಎಸ್ ಶಾಲೆಗಳು ಆರಂಭಿಸಲು ಕ್ರಮ
ಬೆಳಗಾವಿ: ನಮ್ಮ ರಕ್ತದಲ್ಲಿ ಕನ್ನಡವಿದೆ. ಹಾಗಾಗಿ ಕನ್ನಡ ಮಾಧ್ಯಮದ ಯಾವುದೇ ಶಾಲೆಗಳನ್ನು (Kannada Medium School) ಮುಚ್ಚುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ (Madhu Bangarappa) ಸ್ಪಷ್ಟಪಡಿಸಿದ್ದಾರೆ.
ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಚಿದಾನಂದ್ ಎಂ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 2025-26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆಪಿಎಸ್ (Karnataka Public School) ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆಪಿಎಸ್ ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮವಹಿಸಲಾಗುವುದು ಎಂದರು. ಇದನ್ನೂ ಓದಿ: ಸಿಎಂ ಹಾದಿಯಾಗಿ 224 ಜನ ಎಂಎಲ್‌ಎ ಅನರ್ಹವಾಗೋದು ಖಚಿತ – ವಕೀಲ ದೇವರಾಜೇಗೌಡ ಬಾಂಬ್
ನಾವು ಬಜೆಟ್‌ನಲ್ಲಿ 500 ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಘೋಷಣೆ ಮಾಡಿದ್ದೇವೆ ಎಂದ ಸಚಿವರು, 2025-26ನೇ ಸಾಲಿನಲ್ಲಿ ಈಗಾಗಲೇ ಕಾರ್ಯಾಚರಣೆಯಲ್ಲಿರುವ 309 ಕೆಪಿಎಸ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ತರಗತಿವರೆಗೆ ಒಟ್ಟು 2,72,464 ವಿದ್ಯಾರ್ಥಿಗಳು ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಕೆಪಿಎಸ್ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಶಿಕ್ಷಕರ ಕೋರಿಕೆ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಪರಿಪೂರ್ಣವಾಗಿ ಹೆಚ್ಚುವರಿ ಶಿಕ್ಷಕರ ಮರುಹೊಂದಾಣಿಕೆ ಪ್ರಕ್ರಿಯೆಯನ್ನು ತರ್ಕಬದ್ಧಗೊಳಿಸುವ ಮೂಲಕ ಕೆಪಿಎಸ್ ಶಾಲೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಗಳಲೆ ರೋಗದಿಂದ ಕೃಷ್ಣಮೃಗಗಳು ಸಾವು: ಈಶ್ವರ ಖಂಡ್ರೆ
ಉತ್ತಮ ಕಲಿಕೆ, ಉಜ್ವಲ ಭವಿಷ್ಯ ಎಂಬುದು ಕೆಪಿಎಸ್ ಶಾಲೆಗಳ ಧ್ಯೇಯ ವಾಕ್ಯವಾಗಿದ್ದು, ಪ್ರತಿ ಮಗುವೂ ಶಾಲೆಯಲ್ಲಿರಬೇಕು ಮತ್ತು ಚೆನ್ನಾಗಿ ಕಲಿಯಬೇಕು ಎಂಬ ಮಹತ್ತರ ಉದ್ದೇಶದಿಂದ ರಾಜ್ಯದ ಎಲ್ಲಾ ಕರ್ನಾಟಕ ಪಬ್ಲಿಕ್ ಶಾಲೆಗಳು ಏಕರೂಪದ ನೀತಿಯನ್ನು ಪಾಲಿಸುವಂತೆ ‘ಕರ್ನಾಟಕ ಪಬ್ಲಿಕ್ ಶಾಲಾ ಮಾನಕಗಳು’ ಕೈಪಿಡಿಯನ್ನು ಸಿದ್ಧಪಡಿಸಲಾಗಿದ್ದು, ಅದರಲ್ಲಿ ನಿಗದಿಪಡಿಸಿರುವ ಗುಣಮಟ್ಟದ ಮಾನದಂಡಗಳಂತೆ ಪ್ರತಿ ಶಾಲೆಯಲ್ಲಿ ಕನಿಷ್ಠ 1,200 ವಿದ್ಯಾರ್ಥಿಗಳಿಗೆ ಅವಶ್ಯಕವಿರುವ ಸಮರ್ಪಕ ಶೈಕ್ಷಣಿಕ ಮತ್ತು ಭೌತಿಕ ಸೌಕರ್ಯಗಳನ್ನು ಒದಗಿಸಿ ಉನ್ನತೀಕರಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಫೋಟೋಶೂಟ್‌ಗೆ ಹೋದವರು ಮಸಣಕ್ಕೆ – ಮದುವೆಯಾಗಬೇಕಿದ್ದ ಭಾವಿ ದಂಪತಿಯ ದುರಂತ ಅಂತ್ಯ

