ಬಳ್ಳಾರಿ: ರಾಜ್ಯದ ಎಲ್ಲಾ ಮದರಸಾಗಳಲ್ಲಿ (Madrasa) ಕನ್ನಡ (Kannada) ಕಲಿಕೆ ಕಡ್ಡಾಯ ಎಂದು ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ವೇದಿಕೆಯಲ್ಲಿ ಮಾತನಾಡಿದ ಅವರು, 90 ದಿನಗಳಲ್ಲಿ ರಾಜ್ಯದ ಎಲ್ಲಾ ಮದರಸಾಗಳಲ್ಲಿ ಕನ್ನಡ ಕಲಿಯಲು ಆದೇಶ ಮಾಡಲಾಗುತ್ತದೆ. ಹೀಗಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಅವ್ರು ನೇತೃತ್ವದಲ್ಲಿ ಕನ್ನಡ ಕಲಿಸುವುದಕ್ಕೆ ತೀರ್ಮಾನ ಮಾಡಲಾಗಿದೆ ಎಂದರು. ಇದನ್ನೂ ಓದಿ: ಭಾರತೀಯ ನೌಕಾಪಡೆಗೆ ಸಹಾಯವಾಗುವ ಭಾರೀ ತೂಕದ ಸಂವಹನ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು!
ಕರ್ನಾಟಕದಲ್ಲಿದ್ದು, ಕನ್ನಡ ಕಲಿಯದಿದ್ದರೆ ಇಷ್ಟು ವರ್ಷಗಳಿಂದ ಇಲ್ಲಿಯೇ ಇದ್ದರೂ ಉಪಯೋಗವಿಲ್ಲ. ಹಾಗಾಗಿ ಎಲ್ಲ ಮದರಸಾಗಳಲ್ಲಿಯೂ ಕನ್ನಡ ಕಲಿಸುವ ವ್ಯವಸ್ಥೆ ಮಾಡಲಾಗಿದೆ. ಸ್ವಾತಂತ್ರ‍್ಯ ಪೂರ್ವದಲ್ಲಿದ್ದ ಉರ್ದು ಶಾಲೆಗಳಲ್ಲಿ ಮೂರು ಭಾಷೆಗಳು ಕಡ್ಡಾಯ ಇದ್ದವು. ಅದೇ ರೀತಿ ಈಗ ಮೊದಲ ಭಾಷೆಯಾಗಿ ಕನ್ನಡ ತೆಗೆದುಕೊಳ್ಳಬೇಕು. ಎರಡನೇ ಭಾಷೆಯಾಗಿ ಉರ್ದು ಹಾಗೂ ಮೂರನೇ ಭಾಷೆಯಾಗಿ ಇಂಗ್ಲೀಷ್ ಭಾಷೆ ಆಯ್ಕೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸು ಮಾಡಿಲ್ಲ: ಸಿದ್ದರಾಮಯ್ಯ

