ಕನ್ನಡತಿ ದಿಶಾ ಮದನ್‌ಗೆ ಕಾನ್ ಫಿಲ್ಮ್ ಫೆಸ್ಟಿವಲ್ ಆಹ್ವಾನ

Public TV
2 Min Read
disha madan

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಫ್ರಾನ್ಸ್‌ನಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್‌ಗೆ (Cannes Film Festival 2025) ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಅತೀ ದೊಡ್ಡ ಚಲನಚಿತ್ರೋತ್ಸವಕ್ಕೆ ದೇಶ ವಿದೇಶದ ನಟ-ನಟಿಯರು ಭಾಗಿಯಾಗುತ್ತಾರೆ. ಇದೀಗ ಈ ಕಾರ್ಯಕ್ರಮಕ್ಕೆ ಕನ್ನಡ ಕಿರುತೆರೆ ನಟಿ ದಿಶಾ ಮದನ್‌ಗೆ (Disha Madan) ಭಾಗಿಯಾಗಲು ಆಹ್ವಾನ ನೀಡಲಾಗಿದೆ. ಈ ಖುಷಿಯನ್ನು ಸೋಷಿಯಲ್ ಮೀಡಿಯಾದಲ್ಲಿ ನಟಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಡಿಂಪಲ್ ಕ್ವೀನ್ ಬಣ್ಣದ ಬದುಕಿಗೆ 12 ವರ್ಷ- ಶುಭಕೋರಿದ ದರ್ಶನ್

disha madan

ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್‌ನಲ್ಲಿ ಶುರುವಾಗಿದೆ. ಮೇ 13ರಿಂದ 24ರ ವರೆಗೆ ಇದು ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಭಾಗಿಯಾಗಲು ಫಿಲ್ಮ್ ಫೆಸ್ಟಿವಲ್ ಟೀಮ್ ಅಳೆದು ತೂಗಿ ಕೆಲವೇ ಕೆಲವು ತಾರೆಯರಿಗೆ ಮಾತ್ರ ಆಮಂತ್ರಣ ನೀಡುತ್ತಾರೆ. ಹೀಗಿರುವಾಗ ಕನ್ನಡತಿ ದಿಶಾಗೆ ಕಾನ್ ಫಿಲ್ಮ್ ಫೆಸ್ಟಿವಲ್‌ಗೆ ಬರಲು ಬಂಪರ್ ಅವಕಾಶ ಸಿಕ್ಕಿದೆ. ಆಹ್ವಾನ ಪತ್ರ ನೀಡಲಾಗಿದೆ. ಇದನ್ನೂ ಓದಿ:ಕಾರ್ತಿಕ್ ಆರ್ಯನ್ ಜೊತೆ ಶ್ರೀಲೀಲಾ ಸೆಲ್ಫಿ- ಡೇಟಿಂಗ್ ಬಗ್ಗೆ ಹಿಂಟ್ ಕೊಟ್ರಾ ಈ ಜೋಡಿ?

disha.madan 144214253 481672716568816 9037503546793346161 n

ದಿಶಾ ಮದನ್ ಹುಟ್ಟಿ ಬೆಳೆದಿದ್ದು ಬೆಂಗಳೂರಲ್ಲಿ. ನಟಿಯ 3ನೇ ವರ್ಷ ಹುಟ್ಟುಹಬ್ಬದ ಸಮಯದಲ್ಲಿ ಅವರನ್ನು ಡ್ಯಾನ್ಸ್ ತರಬೇತಿಗೆ ಸೇರಿಸಲಾಯಿತು. ಮೂರು ಗಂಟೆಗೂ ಜಾಸ್ತಿ ನಿರಂತರ ನೃತ್ಯಾಭ್ಯಾಸ ಮಾಡುತ್ತಿದ್ದರು. ಹೀಗೆ ನೃತ್ಯ ಮಾಡಿ ಸುಸ್ತಾಗಿ ಬಂದಾಗ ಅಮ್ಮ ಮುದ್ದು ಮಾಡಿ ಊಟ ಮಾಡಿಸುತ್ತಿದ್ದರು. ರಾಜ್‌ಕುಮಾರ್ ಅವರ ಸಿನಿಮಾಗಳ ಹಾಡನ್ನ ಹಾಡಿ ಮಲಗಿಸುತ್ತಿದ್ದರು. ಭಾನುವಾರ ಬಂದರೆ ಅಜ್ಜ ‘ಬಬ್ರುವಾಹನ’ ಚಿತ್ರವನ್ನ ಮನೆಯಲ್ಲಿ ಹಾಕುತ್ತಿದ್ದರು. ಹೀಗೆ ಬಾಲ್ಯದಿಂದಲೂ ಸಿನಿಮಾ ಜೀವನದ ಒಂದು ಭಾಗವೇ ಆಗಿದೆ ಎಂದು ನಟಿ ವಿಡಿಯೋದಲ್ಲಿ ಹೇಳಿದ್ದಾರೆ. ಪ್ರತಿಯೊಬ್ಬ ನರ್ತಕಿಯಲ್ಲೂ ಒಬ್ಬ ನಟಿ ಇರುತ್ತಾಳೆ. ಹೀಗಾಗಿ ಆಕಸ್ಮಿಕವಾಗಿ ನಟನೆಗೆ ಎಂಟ್ರಿ ಕೊಟ್ಟಿದ್ದಾಗಿ ಹೇಳಿದ್ದಾರೆ.

 

View this post on Instagram

 

A post shared by Disha Madan (@disha.madan)

ರಾಜ್‌ಕುಮಾರ್, ವಿಷ್ಣುವರ್ಧನ್, ಶಂಕರ್ ನಾಗ್, ಪುಟ್ಟಣ್ಣ ಕಣಗಾಲ್ ಇಂತಹ ದಿಗ್ಗಜರು ನಮ್ಮ ಕರ್ನಾಟಕದವರು ಎಂದು ಹೇಳಲು ಹೆಮ್ಮೆಯಾಗುತ್ತದೆ. ನಾನು ಕೂಡ ಅವರಂತೆಯೇ ಕರ್ನಾಟಕದವಳು ಎಂದು ಹೇಳಲು ಖುಷಿ ಮತ್ತು ಹೆಮ್ಮೆಯಿದೆ. ಹೀಗಿರುವಾಗ ಇಂದು ನನ್ನನ್ನು ವಿಶ್ವದ ಕೆಲವು ಅತ್ಯುತ್ತಮ ಚಲನಚಿತ್ರಗಳನ್ನು ವೀಕ್ಷಿಸಲು ಕಾನ್ ಫಿಲ್ಮ್ ಫೆಸ್ಟಿವಲ್‌ಗೆ ಆಹ್ವಾನಿಸಲಾಗಿದೆ. ಇಲ್ಲಿಯವರೆಗಿನ ನನ್ನ ಪ್ರಯಾಣವು ಅವಿಸ್ಮರಣೀಯ ಎಂದು ನಟಿ ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ನಟಿ ದಿಶಾ ‘ಲಕ್ಷ್ಮಿ ನಿವಾಸ’ (Lakshmi Nivasa) ಸೀರಿಯಲ್‌ನಲ್ಲಿ ಭಾವನಾ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮನೋಜ್ಞ ನಟನೆಯಿಂದ ಮನೆ ಮಾತಾಗಿದ್ದಾರೆ.

Share This Article