ಕನ್ನಡೇತರರಿಗೆ ಕನ್ನಡ ಕಲಿಸುವ ಉದ್ದೇಶದಿಂದ ‘ಕನ್ನಡ ನುಡಿ ಕಲಿಕೆ ಪಾಠಗಳ’ ಅಭಿಯಾನ ಆರಂಭ

Public TV
1 Min Read
SUNILKUMAR

ಬೆಂಗಳೂರು: ಬೆಂಗಳೂರಿನಲ್ಲಿ ನೆಲೆಸಿರುವ ಕನ್ನಡೇತರರಿಗೆ ಕನ್ನಡ ಕಲಿಸುವ ಉದ್ದೇಶದಿಂದ ‘ಕನ್ನಡ ನುಡಿ ಕಲಿಕೆ ಪಾಠಗಳ’ ವಿಶೇಷ ಅಭಿಯಾನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ರೂಪಿಸಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನಿಲ್ ಕುಮಾರ್ ಅಭಿಪ್ರಾಯಪಟ್ಟು, ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ರೂಪಿಸಲಾದ ‘ಕನ್ನಡ ನುಡಿ ಕಲಿಕೆ ಪಾಠಗಳ’ ಲಿಂಕ್ ಅನ್ನು ಇಂದು ಬಿಡುಗಡೆಗೊಳಿಸಿದರು.

SUNILKUMAR 1

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕನ್ನಡ ಭಾಷೆಯನ್ನು ಬೆಳೆಸುವ ಉದ್ದೇಶದಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿಶೇಷ ಅಭಿಯಾನಗಳನ್ನು ರೂಪಿಸಿ ನಡೆಸಿದೆ. ಕನ್ನಡದ ಮೇಲೆ ಆಸಕ್ತಿ ಇರುವ ಅನ್ಯಭಾಷಿಕರಿಗೆ ಹಾಗೂ ಬೆಂಗಳೂರಿನಲ್ಲಿ ನೆಲೆಸಿರುವ ಕನ್ನಡೇತರರಿಗೆ ಕನ್ನಡ ಕಲಿಸುವ ಉದ್ದೇಶದಿಂದ ಕನ್ನಡ ನುಡಿ ಕಲಿಕೆ ಪಾಠಗಳು ವಿಶೇಷ ಅಭಿಯಾನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ರೂಪಿಸಿದೆ. ಕನ್ನಡ ನುಡಿ ಕಲಿಕೆ ಪಾಠಗಳ ಮೂಲಕ ರಾಜ್ಯದಲ್ಲಿ ನೆಲೆಸಿರುವ ಅನ್ಯಭಾಷಿಕರು ಕನ್ನಡವನ್ನು ಕಲಿತು ಬಳಸುವಂತಾಗಲಿ. ಆ ಮೂಲಕ ಕನ್ನಡದ ಕಂಪು ಜಗತ್ತಿನಾದ್ಯಂತ ಪಸರಿಸುವಂತಾಗಲಿ ಎಂದ ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಈ ಕಾರ್ಯ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಇದನ್ನೂ ಓದಿ: ನಮ್ಮ ಮನೆಯಲ್ಲಿ ಅಲ್ಲಾ,ಏಸು ಫೋಟೋ ಇಟ್ಟಿಲ್ಲ- ಸತೀಶ್ ಸೈಲ್

ಕನ್ನಡ ನುಡಿ ಕಲಿಕೆ ಪಾಠಗಳು ಸದ್ಯದಲ್ಲಿಯೇ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ಅಪ್ ಲೋಡ್ ಮಾಡಲಾಗುವುದು. ಮೊದಲಿಗೆ ಪಾಠ 1 ಮತ್ತು ಪಾಠ 2 ಅನ್ನು ಅಪ್ ಲೋಡ್ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಉಳಿದ ಪಾಠಗಳನ್ನು ಅಪ್ ಲೋಡ್ ಮಾಡಲಾಗುವುದು. ಇದನ್ನೂ ಓದಿ: ಮಗಳು, ಇಬ್ಬರು ಪತ್ನಿಯರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟ ಕೆಜಿಎಫ್ ಬಾಬು

ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಹಾಗೂ ಕಾರ್ಯದರ್ಶಿಯವರಾದ ಡಾ.ಸಂತೋಷ ಹಾನಗಲ್ಲ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *