ಚಿಕ್ಕಬಳ್ಳಾಪುರ: ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ, ವೀಡಿಯೋ ಮಾಡಬಾರದೆಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆದಿದ್ದರು. ಈ ಆದೇಶದಲ್ಲಿ ವ್ಯಾಕರಣ ದೋಷ ಹೆಚ್ಚಿದ್ದರಿಂದ ಭಾರೀ ಟೀಕೆ ವ್ಯಕ್ತವಾಗಿತ್ತು. ಇದೀಗ ಮತ್ತೊಮ್ಮೆ ತಿದ್ದುಪಡಿ ಮಾಡಲು ಆದೇಶಿಸಿದೆ.
ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ, ವೀಡಿಯೋ ಮಾಡಬಾರದೆಂದು ಸರ್ಕಾರ ಹೊರಡಿಸಿದ ಆದೇಶವನ್ನು ರಾಜ್ಯ ಸರಕಾರ ಮಧ್ಯರಾತ್ರಿ ಹಿಂಪಡೆದಿದೆ. ಆದರೆ ಆ ಆದೇಶದಲ್ಲಿ ವ್ಯಾಕರಣ ದೋಷಗಳೇ ತುಂಬಿರುವುದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಟೀಕೆಗೆ ಒಳಗಾಗಿತ್ತು.
Advertisement
Advertisement
ಈ ಹಿನ್ನೆಲೆಯಲ್ಲಿ ಆದೇಶದಲ್ಲಿ ಆಗಿದ್ದ ವ್ಯಾಕರಣದ ಲೋಪದೋಷಗಳನ್ನು ಸರಿಪಡಿಸಿ ಮತ್ತೊಮ್ಮೆ ತಿದ್ದುಪಡಿ ಮಾಡಿ ಆದೇಶ ಹೊರಡಿಸಲಾಗಿದೆ. ಅಂದಹಾಗೆ ನಡಾವಳಿ ಎಂಬ ಶಬ್ದವನ್ನು ನಡವಳಿ, ಪ್ರಸ್ತಾವನೆಯನ್ನು ಪ್ರಸತ್ತಾವನೆ, ಮೇಲೆ- ಮೇಲೇ, ಭಾಗ- ಬಾಗ, ಕರ್ನಾಟಕ- ಕರ್ನಾಟಾ, ಆಡಳಿತ- ಆಡಳಿದ ಎಂದು ಬರೆಯಲಾಗಿತ್ತು. ಇದನ್ನೂ ಓದಿ: ಕಠಿಣ ಪರಿಶ್ರಮದ ಮೂಲಕ ಕನ್ನಡಿಗರು ಉದ್ಯಮರಂಗದಲ್ಲಿ ಪ್ರಗತಿ ಸಾಧಿಸಬೇಕು: ಬೊಮ್ಮಾಯಿ
Advertisement
Advertisement
ರಾಜ್ಯ ಸರ್ಕಾರದ ಈ ಆದೇಶದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದೇನಾ ಆಡಳಿತದಲ್ಲಿ ಕನ್ನಡ ಎಂದು ನೆಟ್ಟಿಗರು ಪ್ರಶ್ನಿಸಿದ್ದರು. ಜಾಲತಾಣದಲ್ಲಿ ಭಾರಿ ಟ್ರೋಲ್ ಆದ ಬೆನ್ನಲ್ಲೇ ಬೆಳಗ್ಗೆ ಅದರ ತಿದ್ದುಪಡಿ ಆದೇಶವನ್ನು ಸರ್ಕಾರ ಪುನಃ ಹೊರಡಿಸಿದ್ದು, ತಪ್ಪುಗಳನ್ನು ಸರಿಪಡಿಸಿದೆ. ಇದನ್ನೂ ಓದಿ: ನನಗೂ ಇತಿಮಿತಿ ಇದೆ – ಸಿದ್ದರಾಮೋತ್ಸವ ಪ್ರಶ್ನೆಗೆ ಡಿಕೆಶಿ ಸಿಟ್ಟು