ಬೆಂಗಳೂರು: ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ಇಂದು ಕರ್ನಾಟಕ ಬಂದ್‍ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್‍ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಹೊಸೂರು ರಸ್ತೆಯಲ್ಲಿ ಪ್ರತಿಭಟನಾಕಾರರು ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ಇಳಿದಿದ್ದಾರೆ.
ಕಳೆದ 101 ದಿನಗಳಿಂದ ಮೌರ್ಯ ಸರ್ಕಲ್‍ನಲ್ಲಿ ಕನ್ನಡ ಪರ ಸಂಘಟನೆಗಳು ಧರಣಿ ಮಾಡುತ್ತಿದ್ದು, ಇಂದು ಬಂದ್‍ಗೆ ಕರೆಕೊಟ್ಟಿದ್ದಾರೆ. ಈ ಹಿನ್ನೆಲೆ ಇಂದು ರಸ್ತೆಯಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ, ರಸ್ತೆ ತಡೆದು ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ, ಸರ್ಕಾರ ಡಾ. ಸರೋಜಿನಿ ಮಹಿಷಿ ವರದಿಯನ್ನ ಜಾರಿಗೆ ತರಬೇಕೆಂದು ಕನ್ನಡ ಪರ ಸಂಘಟನೆಗಳು ಪ್ರತಿಭಟಿಸುತ್ತಿವೆ.
Advertisement
Advertisement
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಬೇಕು ಎಂದು 400ಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳು ಬಂದ್ ಮಾಡುತ್ತಿದ್ದು, ಇತ್ತ ಬೆಳಗ್ಗೆಯೇ ಮಾಗಡಿ ರಸ್ತೆಯಲ್ಲಿ ಅಂಗಡಿ ಮುಂಗಟ್ಟುಗಳನ್ನ ಕನ್ನಡ ಪರ ಸಂಘಟನೆಗಳು ಮುಚ್ಚಿಸೋ ಮೂಲಕ ಬಂದ್‍ಗೆ ಸಹಕಾರ ನೀಡುವಂತೆ ಕೇಳಿವೆ.
Advertisement
ಇಂದು ಕರ್ನಾಟಕ ಬಂದ್ ಇರುವುದರಿಂದ ಅಂಗಡಿ ತರೆಯದಂತೆ ಅಂಗಡಿ ಮಾಲೀಕರಿಗೆ ಪ್ರತಿಭಟನಾಕಾರರು ಮನವರಿಕೆ ಮಾಡಿಕೊಟ್ಟು, ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಿದ್ದಾರೆ.