ವಿಜಯ್ ಅಭಿನಯದ ‘ಲಿಯೋ’ ಚಿತ್ರದ ಬಿಡುಗಡೆಗೆ ಇನ್ನೊಂದು ತಿಂಗಳು ಮಾತ್ರ ಬಾಕಿ ಇದ್ದು, ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲ ಮತ್ತು ನಿರೀಕ್ಷೆ ಹೆಚ್ಚಾಗಿದೆ. ಈ ಮಧ್ಯೆ, ಚಿತ್ರವನ್ನು ನಿರ್ಮಿಸುತ್ತಿರುವ 7 ಸ್ಕ್ರೀನ್ ಸ್ಟುಡಿಯೋ ಸಂಸ್ಥೆಯು, ಚಿತ್ರದ ಕನ್ನಡ ಪೋಸ್ಟರ್ ಬಿಡುಗಡೆ ಮಾಡಿದೆ.
Advertisement
ತಮಿಳಿನ ಜನಪ್ರಿಯ ನಿರ್ದೇಶಕರಾದ ಲೋಕೇಶ್ ಕನಕರಾಜ್ ನಿರ್ದೇಶಿಸಿರುವ ‘ಲಿಯೋ’ ಚಿತ್ರದಲ್ಲಿ ‘ಇಳಯದಳಪತಿ’ ವಿಜಯ್, ತ್ರಿಷಾ, ಸಂಜಯ್ ದತ್, ಅರ್ಜುನ್ ಸರ್ಜಾ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ:‘ಜವಾನ್ 2’ ಜೊತೆ ಮತ್ತೊಂದು ಸರ್ ಪ್ರೈಸ್ ನೀಡಿದ ನಿರ್ದೇಶಕ ಅಟ್ಲಿ
Advertisement
Advertisement
‘ಲಿಯೋ’ ಚಿತ್ರವು ಒಂದು ಅದ್ಭುತ ಅನುಭವ ನೀಡುವ ಚಿತ್ರವಾಗಿ ರೂಪುಗೊಂಡಿದ್ದು, ಇದರಲ್ಲಿ ಆಕ್ಷನ್, ಡ್ರಾಮಾ, ಎಮೋಷನ್ ಸೇರಿದಂತೆ ಎಲ್ಲಾ ಭಾಷೆಯ ಮತ್ತು ಪ್ರದೇಶದ ಜನರನ್ನು ಆಕರ್ಷಿಸುವಂತಹ ಅಂಶಗಳಿವೆ.
Advertisement
ಇನ್ನು, ಚಿತ್ರದ ಕರ್ನಾಟಕ ವಿತರಣೆಯ ಹಕ್ಕುಗಳನ್ನು ಸ್ವಾಗತ್ ಎಂಟರ್ ಪ್ರೈಸಸ್ ಸಂಸ್ಥೆಯು ತನ್ನದಾಗಿಸಿಕೊಂಡಿದ್ದು, ಚಿತ್ರವನ್ನು ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡುವುದಕ್ಕೆ ಸಜ್ಜಾಗಿದೆ. ‘ಲಿಯೋ’ ಚಿತ್ರವು ಅಕ್ಟೋಬರ್ 19ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.
Web Stories