ಬೆಂಗಳೂರು: ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಮತ್ತು ರಾಜ್ಯೋತ್ಸವದ ಅಂಗವಾಗಿ ವಿಕಾಸ ಟ್ರಸ್ಟ್ “ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ”ವನ್ನು ಆರಂಭಿಸಿದೆ.
ಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಪ್ರಥಮ ದಿನದ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಅಭಿಯಾನವನ್ನು ಉದ್ಘಾಟಿಸಿದರು. ಇದನ್ನೂ ಓದಿ: ಅನಂತಪದ್ಮನಾಭ ಸ್ವಾಮಿ ದೇವಾಲಯದಲ್ಲಿ ಪ್ರವಚನದ ವೇಳೆ ಮೊಸಳೆ ಪ್ರತ್ಯಕ್ಷ
Advertisement
ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ವ್ಯಕ್ತಿಗಳನ್ನು ಗುರುತಿಸಿದನ್ನು, ಶ್ಲಾಘಿಸಿ, ಪ್ರೋತ್ಸಾಹಿಸಿದ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಷಿಯವರಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು.@narendramodi @BSBommai https://t.co/sPcGWq1eCe
— Sunil Kumar Karkala (@karkalasunil) November 1, 2021
Advertisement
ಈ ಸಂದರ್ಭದಲ್ಲಿ ವಿಕಾಸ ಟ್ರಸ್ಟ್ ಅಧ್ಯಕ್ಷರಾದ ರವಿನಾರಾಯಣ ಗುಣಾಜೆ, ಸದಸ್ಯರಾದ ಸುಖೇಶ್ ರೈ ಮತ್ತು ಧನ್ಯಶ್ರೀ ಮುಂತಾದವರು ಉಪಸ್ಥಿತರಿದ್ದರು. ಈ ಡಿಜಿಟಲ್ ಅಭಿಯಾನವು ನವೆಂಬರ್ 1 ರಿಂದ ಜನವರಿ 14 ರವರೆಗೆ 75 ದಿನಗಳ ಕಾಲ ನಡೆಯಲಿದೆ. ಇದನ್ನೂ ಓದಿ: ಪಾಕ್ ಪರ ಘೋಷಣೆ- ದೇಶದ್ರೋಹ ಪ್ರಕರಣ ದಾಖಲಿಸಿ ಯುವಕನ ಬಂಧನ
Advertisement
ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಯಾವುದೇ ಪ್ರಭಾವ, ಒತ್ತಡಕ್ಕೆ ಒಳಗಾಗಿಲ್ಲ ಎಂದು ವಿಶ್ವಾಸದಿಂದ ಹೇಳಬಲ್ಲೆ. ಈ ಬಾರಿ ಪ್ರಶಸ್ತಿ ಸಾಧಕರನ್ನು ಹುಡುಕಿಕೊಂಡು ಬಂದಿದೆ. ಸಣ್ಣಪುಟ್ಟ ನಿಯಮಾವಳಿಗಳ ಬದಲಾವಣೆಯಾಗಬೇಕು ಅನಿಸುತ್ತಿದೆ. ಮುಂದಿನ ವರ್ಷ ರಾಜ್ಯಕ್ಕೆ ಏಕರೂಪ ನಿಯಮ ಜಾರಿ ಮಾಡತ್ತೇವೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.