Connect with us

Bengaluru City

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ: 63 ಸಾಧಕರ ಹೆಸರು ಇಲ್ಲಿದೆ

Published

on

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡುವ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು. ಈ ಬಾರಿ 62 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಈ ಬಾರಿ ಸಾಧಕರ ಪಟ್ಟಿಯಲ್ಲಿ ನ್ಯಾ. ನಾಗಮೋಹನ್ ದಾಸ್, ಗಾಯಕ ಯೇಸುದಾಸ್, ಲೇಖಕಿ ವೈದೇಹಿ, ಮುಖ್ಯಮಂತ್ರಿ ಚಂದ್ರು ಹಾಗೂ ಬರಹಗಾರ ರಾಮಚಂದ್ರ ಗುಹಾ ಅವರು ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ ರಾಜ್ಯ ಸರ್ಕಾರ ಪ್ರಶಸ್ತಿಗಳನ್ನು ಘೋಷಿಸುತ್ತದೆ. ಸದ್ಯ ಪ್ರಶಸ್ತಿ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಸಾಧಕರಿಗೆ ನವೆಂಬರ್ 1 ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.

ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟವಾಗುತ್ತಿದಂತೆ ಹಲವು ಕನ್ನಡ ಪರ ಸಂಘಟನೆಗಳು ಸರ್ಕಾರದ ವಿರುದ್ಧ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿವೆ. ಸರ್ಕಾರವು ಪ್ರಶಸ್ತಿಯ ಆಯ್ಕೆ ಸಂದರ್ಭದಲ್ಲಿ ಕನ್ನಡ ಹೋರಾಟಗಾರರನ್ನು ನಿರ್ಲಕ್ಷ್ಯಸಿಲಾಗಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಸತತ 32 ವರ್ಷಗಳಿಂದ ಕನ್ನಡ ಹೋರಾಟಗಾರಿಗೆ ಸತತ ಅನ್ಯಾಯವಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ಅದರೂ ಕನ್ನಡ ಹೋರಾಟಗಾರರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡುವಂತೆ ಕನ್ನಡ ಸಂಘಟನೆಗಳ ಒತ್ತಾಯ ಮಾಡಿವೆ. ಈ ಸಂಬಂಧ ಕಳೆದ ಹಲವು ವರ್ಷಗಳಿಂದ ಅಪಸ್ವರಗಳು ಕೇಳಿಬಂದಿದ್ದರೂ ಸರ್ಕಾರ ಮಾತ್ರ ತಲೆ ಕೆಡಿಸಿಕೊಂಡಿಲ್ಲ.

ಪ್ರತಿ ಬಾರಿ ಅರ್ಜಿ ಆಹ್ವಾನಿಸಿದಾಗಲು ಕನ್ನಡ ಪರ ಹೋರಾಟಗಾರರು ಅರ್ಜಿ ಸಲ್ಲಿಸ್ತಾರೆ. ಆದರೆ ಆಯ್ಕೆ ಸಂದರ್ಭದಲ್ಲಿ ಮಾತ್ರ ವಿಜ್ಞಾನಿಗಳನ್ನು, ಕಲಾವಿದರನ್ನು ಮತ್ತು ಚಲನಚಿತ್ರ ನಟರನ್ನು ಆಯ್ಕೆ ಮಾಡಲಾಗುತ್ತೆ. ಹಾಗಾಗಿ ಇದರಿಂದಾಗಿ ಕನ್ನಡ ಹೋರಾಟಗಾರರಿಗೆ ತೀವ್ರ ಅವಮಾನ ಮಾಡಿದಂತಾಗಿದೆ. ಈ ವರ್ಷವಾದರೂ ಸಾಹಿತಿ, ಕವಿಗಳ ಜೊತೆಗೆ ಪ್ರತಿ ಜಿಲ್ಲೆಯಲ್ಲಿ ಕನ್ನಡ ಹೋರಾಟಗಾರರನ್ನು ಗುರುತಿಸಿ, ರಾಜ್ಯ ಪ್ರಶಸ್ತಿ ನೀಡಬೇಕು ಎಂದು ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸರ್ಕಾರದ ದೋರಣೆಯ ಕುರಿತು ಮಾತನಾಡಿದ ಕನ್ನಡ ಅನುಷ್ಠಾನ ಮಂಡಳಿ ಅಧ್ಯಕ್ಷ ಪ್ರಸಾದ್, ಕಳೆದ ಮೂವತ್ತು ವರ್ಷಗಳಿಂದ ಯಾವೊಬ್ಬ ಕನ್ನಡ ಪರ ಹೋರಾಟಗಾರರಿಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿಲ್ಲ. ಚಿತ್ರರಂಗದ ಸೇವೆ ಮಾಡಿದಕ್ಕೆ ಸಾ.ರಾ ಗೋವಿಂದ್ ಅವರಿಗೆ ಪ್ರಶಸ್ತಿ ಸಿಕ್ಕಿದೆ. ಆದರೆ ಕನ್ನಡ ಹೋರಾಟಗಾರ ಅಂತಾ ಪ್ರಶಸ್ತಿ ನೀಡಿಲ್ಲ. ಈ ಬಾರಿ ಆದರೂ ಹೋರಾಟಗಾರರನ್ನು ಪರಿಗಣನೆಗೆ ತೆಗೆದುಕೊಳ್ಳುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲು ಕನ್ನಡ ಪರ ಸಂಘಟನೆಗಳು ಮುಂದಾಗಿವೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಈ ನಡೆಯನ್ನು ವಿರೋಧಿಸಿ ಎಲ್ಲಾ ಕನ್ನಡ ಸಂಘಟನೆಗಳು ಈ ಒಟ್ಟುಗೂಡಿ ಸರ್ಕಾರದ ಧೋರಣೆ ವಿರುದ್ಧ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.

 

 

 

Click to comment

Leave a Reply

Your email address will not be published. Required fields are marked *