ಬೆಳಗಾವಿ: ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವ (Kannada Rajyotsava) ಸಂಭ್ರಮ ಜೋರಾಗಿದೆ. ಗಡಿಜಿಲ್ಲೆ ಬೆಳಗಾವಿಯಲ್ಲಿ (Belagavi) ವಿವಿಧ ಕನ್ನಡಪರ ಸಂಘಟನೆಗಳಿಂದ ಮಧ್ಯರಾತ್ರಿಯೇ ರಾಜ್ಯೋತ್ಸವ ಸಂಭ್ರಮ ಮಾಡಲಾಗಿದೆ.
ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಕೇಕ್ ಕಟ್ ಮಾಡಿ, ಸಿಡಿಮದ್ದು ಸಿಡಿಸಿ ಸಂಭ್ರಮಿಸಲಾಗಿದೆ. ಪುಟ್ಟ ಪುಟ್ಟ ಮಕ್ಕಳು ಸೇರಿ ಸಾವಿರಾರು ಸಂಖ್ಯೆಯಲ್ಲಿ ಜನರು ಸಂಭ್ರಮದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಅಪ್ಪುಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲು ಸರಕಾರ ತಿದ್ದುಪಡಿ ಮಾಡಿದ ನಿಯಮವೇನು?
Advertisement
Advertisement
ಅಂತೆಯೇ ಇಂದು ಬೆಳಗಾವಿಯಲ್ಲಿ ಅದ್ಧೂರಿ ರಾಜ್ಯೋತ್ಸವ ಮೆರವಣಿಗೆ ನಡೆಯಲಿದೆ. ಬೆಳಗ್ಗೆ 10:30ಕ್ಕೆ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಜರುಗಲಿದೆ. ಸಚಿವ ಗೋವಿಂದ ಕಾರಜೋಳ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ತಾಯಿ ಭುವನೇಶ್ವರಿಗೆ ಚಾಲನೆ ನೀಡಲಿದ್ದಾರೆ.
Advertisement
Advertisement
ಬಳಿಕ ಬೆಳಗಾವಿಯಲ್ಲಿ ಅದ್ಧೂರಿ ರಾಜ್ಯೋತ್ಸವ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಅದ್ಧೂರಿ ಮೆರವಣಿಗೆಯಲ್ಲಿ ನೂರಕ್ಕೂ ಹೆಚ್ಚು ರೂಪಕ ವಾಹನಗಳು ಭಾಗಿಯಾಗಲಿವೆ. ಅದ್ಧೂರಿ ರಾಜ್ಯೋತ್ಸವ ಮೆರವಣಿಗೆಯಲ್ಲಿ ಸುಮಾರು ಒಂದು ಲಕ್ಷ ಜನ ಸೇರುವ ಸಾಧ್ಯತೆ ಇದೆ. ಇದನ್ನೂ ಓದಿ: ನಟ ಪುನೀತ್ ರಾಜ್‌ಕುಮಾರ್‌ಗೆ ಇಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ