ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಅನುಮತಿ ಕೊಡುವ ಬಗ್ಗೆ ಸೂಕ್ತ ಸಮಯದಲ್ಲಿ, ಸೂಕ್ತ ಕಾಲದಲ್ಲಿ, ಸೂಕ್ತ ನಿರ್ಧಾರ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಇದೊಂದು ಸೂಕ್ಷ್ಮ ವಿಚಾರವಾಗಿದೆ. ಅನುಮತಿ ಬೇಕು ಅಂತ ಈವರೆಗೂ ನನಗೆ ಯಾವುದೇ ಮನವಿಗಳು ಬಂದಿಲ್ಲ. ಡಿಸಿಗೆ ಮನವಿ ಕೊಟ್ಟಿದ್ದರೆ ಅವರು ಆ ಬಗ್ಗೆ ಸೂಕ್ತ ಸೂಚನೆ ಕೊಡುತ್ತಾರೆ ಎಂದು ತಿಳಿಸಿದರು.
Advertisement
Advertisement
75 ವರ್ಷಗಳ ಬಳಿಕ ಮೊದಲ ಬಾರಿಗೆ ಅಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡುವ ನಿರ್ಧಾರ ಮಾಡಲಾಯಿತು. ಗಣರಾಜೋತ್ಸವ ಕೂಡಾ ಮಾಡುತ್ತೇವೆ. ಮುಂದೆ ಕನ್ನಡ ರಾಜ್ಯೋತ್ಸವ ಮಾಡಲು ಆದೇಶ ಹೊರಡಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡ್ತೀವಿ – ಅಶೋಕ್ ಘೋಷಣೆ
Advertisement
ಗಣೇಶೋತ್ಸವದ ಬಗ್ಗೆ ನಾನು ಕೂಡ ಗಂಭೀರವಾಗಿ ಆಲೋಚನೆ ಮಾಡುತ್ತಿದ್ದೇನೆ. ಕಾನೂನು ಸುವ್ಯವಸ್ಥೆ ಬಹಳ ಪ್ರಮುಖ. ಗಣೇಶ ಕೂರಿಸುವ ಸಂಬಂಧ ಇಂದು ಪೊಲೀಸರು, ಬಿಬಿಎಂಪಿ ಅಧಿಕಾರಿಗಳು ಸಭೆ ಮಾಡ್ತಿದ್ದಾರೆ. ಚಾಮರಾಜಪೇಟೆ ಗಣೇಶೋತ್ಸವ ವಿಚಾರ ಗಂಭೀರವಾಗಿ ಚಿಂತನೆ ಮಾಡಬೇಕಿದೆ ಎಂದರು.
Advertisement
ಅಧಿಕಾರಿಗಳಿಂದ ಈಗಾಗಲೇ ನಾನು ಮಾಹಿತಿ ಪಡೆದಿದ್ದೇನೆ. ಯಾವ ಸಂದರ್ಭದಲ್ಲಿ ಏನು ಕ್ರಮ ತಗೊಬೇಕು ಎಂದು ಸೂಕ್ತ ನಿರ್ಧಾರ ಮಾಡುತ್ತೇವೆ. ಸೂಕ್ತ ಕಾಲ, ಸೂಕ್ತ ಸಮಯ ನೋಡಿಕೊಂಡು ತೀರ್ಮಾನ ಮಾಡುತ್ತೇವೆ. ಅನುಮತಿ ಬಗ್ಗೆ ಸಿಎಂ ಬೊಮ್ಮಾಯಿ ಜೊತೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ತುಮಕೂರಿನ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ಸಂತಾಪ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ