ಯಾದಗಿರಿ: ಗಡಿ ಜಿಲ್ಲೆ ಯಾದಗಿರಿಯಲ್ಲಿ ಸಡಗರ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ದಿನವನ್ನು ಸೋಮವಾರ ಆಚರಣೆ ಮಾಡಲಾಯಿತು. ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ರಾಗಾಪ್ರಿಯಾ ಅವರು ರಾಷ್ಟಧ್ವಜಾರೋಹಣವನ್ನು ಮಾಡಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.. ಇದನ್ನೂ ಓದಿ: ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ: ಮೋದಿ ಶುಭಾಶಯ
ಮೊದಲಿಗೆ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಜಿಲ್ಲಾಧಿಕಾರಿ ಡಾ.ರಾಗಾಪ್ರಿಯಾ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಪೊಲೀಸರಿಂದ ಪಥಸಂಚಲನ ನಡೆಯಿತು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವ್ಯಕ್ತಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಇದನ್ನೂ ಓದಿ: ಕೋಟೆನಾಡಲ್ಲಿ ಅಸ್ಪೃಶ್ಯತೆ, ಕೋಮುವಾದ ವಿರೋಧಿಸಿ 101 ಜನ ಬೌದ್ಧ ಧರ್ಮಕ್ಕೆ ಮತಾಂತರ
ಶಾಸಕ ವೆಂಕಟರೆಡ್ಡಿ ಮುದ್ನಾಳ, ಎಸ್ಪಿ ಡಾ.ಸಿ.ಬಿ.ವೇದಮೂರ್ತಿ, ನಗರಸಭೆ ಅಧ್ಯಕ್ಷ ವಿಲಾಸ್ ಪಾಟೀಲ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.