ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದಿನಿದ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಲಿದೆ.
ನಗರದ ಮಹಾರಾಜ ಕಾಲೇಜ್ ಮೈದಾನದಲ್ಲಿ ಮೂರು ದಿನಗಳ ಕನ್ನಡ ಅಕ್ಷರ ಜಾತ್ರೆ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆಗಳು ಮುಗಿದಿವೆ. ಹಿರಿಯ ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ್ ಈ ಸಮ್ಮೇಳನದ ಅಧ್ಯಕ್ಷರಾಗಿದ್ದು, ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟಿಸಲಿದ್ದಾರೆ.
Advertisement
Advertisement
ಮೈಸೂರು ಅರಮನೆಯ ದರ್ಬಾರ್ ಮಾದರಿಯಲ್ಲಿ ಮುಖ್ಯವೇದಿಕೆ ಸಿದ್ಧ ಮಾಡಲಾಗಿದೆ. ಒಟ್ಟು 22 ಗೋಷ್ಠಿಗಳು ನಡೆಯಲಿವೆ. ಪ್ರಧಾನ ವೇದಿಕೆಯಲ್ಲಿ ಸಮ್ಮೇಳನದ ಮೊದಲ ದಿನದ ಸಂಜೆ 5 ಗಂಟೆಗೆ ಮಾಧ್ಯಮ ಮುಂದಿರುವ ಸವಾಲು ಕುರಿತು ಪ್ರಮುಖ ಗೋಷ್ಠಿ ನಡೆಯಲಿದ್ದು, ಪಬ್ಲಿಕ್ ಟಿವಿಯ ಮುಖ್ಯಸ್ಥರಾದ ಎಚ್.ಆರ್. ರಂಗನಾಥ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
Advertisement
Advertisement
11 ಸಾವಿರ ಪ್ರತಿನಿಧಿಗಳು ಸಮ್ಮೇಳನಕ್ಕೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿಭಾಯಿಸಲು 200 ಕೌಂಟರ್ ತೆರೆಯಲಾಗಿದ್ದು ಊಟಕ್ಕಾಗಿ 2,75 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ.