ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್(82) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ
ದೀರ್ಘಕಾಲದ ಅನಾರೋಗ್ಯ ದಿಂದ ಬಳಲುತ್ತಿದ್ದ ಚಂದ್ರಶೇಖರ ಪಾಟೀಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ 6:30ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ಕೋಣನಕುಂಟೆ ಕ್ರಾಸ್‌ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
Advertisement
ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ, ಆಡಳಿತಗಾರ, ಕನ್ನಡ ಹೋರಾಟಗಾರ ಹೀಗೆ ಬಹುಮುಖ ವ್ಯಕ್ತಿತ್ವದ ಮೂಲಕ ಗುರತಿಸಿಕೊಂಡಿದ್ದ ಅವರು ʼಚಂಪಾʼ ಕಾವ್ಯನಾಮದ ಮೂಲಕ ಪ್ರಸಿದ್ಧರಾಗಿದ್ದರು. ಚಂಪಾ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
Advertisement
Advertisement
ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್ 18ರಂದು ಜನಿಸಿದ್ದ ಚಂಪಾ ಇಂಗ್ಲೆಂಡಿನ ಲೀಡ್ಸ್ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್ ಸಂಸ್ಥೆಯಿಂದ ಇಂಗ್ಲಿಷ್ ಅಧ್ಯಯನದ ಡಿಪ್ಲೊಮ ಪಡೆದಿದ್ದರು.
Advertisement
ಕನ್ನಡಕ್ಕಾಗಿ ದುಡಿಯುತ್ತಿದ್ದ ಚಂದ್ರಶೇಖರ ಪಾಟೀಲರನ್ನು ಕರ್ನಾಟಕ ಸರ್ಕಾರವು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಿಸಿತ್ತು. 1996-99ರ ಅವಧಿಗೆ ಈ ಜವಾಬ್ಧಾರಿಯನ್ನು ನಿರ್ವಹಿಸುವುದರ ಜೊತೆಗೆ 2004-08 ಅವಧಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾಯಿತ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.