ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಸಕ್ರಿಯರಾಗಿರುವ ರಂಜನಿ ರಾಘವನ್ ಇದೀಗ ವಿಭಿನ್ನ ಫೋಟೋಶೂಟ್ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಈ ಭಿನ್ನ ಫೋಟೋಶೂಟ್ ಸಾಮಾಜಿಕ ಜಾಲತಾಣದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡುತ್ತಿದೆ.
View this post on Instagram
ಪುಟ್ಟಗೌರಿ ಮದುವೆ, ಕನ್ನಡತಿ ಸೀರಿಯಲ್ ಮೂಲಕ ಮನೆಮಾತಾಗಿರುವ ನಟಿ ರಂಜನಿ ರಾಘವನ್, ದೊಡ್ಡಪರದೆಯಲ್ಲಿ ಕೂಡ ಕಮಾಲ್ ಮಾಡ್ತಿದ್ದಾರೆ. ಇದೀಗ ಗೂಗಲ್ ಎಂದು ಬರೆದುಕೊಂಡಿರುವ ಸೀರೆ ಉಟ್ಟು ಮಿರ ಮಿರ ಅಂತಾ ಮಿಂಚ್ತಿದ್ದಾರೆ. ಭುವಿಯ ನಯಾ ಲುಕ್‌ಗೆ ನೆಟ್ಟಿಗರ ಗಮನ ಸೆಳೆದಿದೆ. ಇದನ್ನೂ ಓದಿ:ಮಾಲಿವುಡ್ ನಟ ಶರತ್ ಚಂದ್ರನ್ ನಿಧನ
View this post on Instagram
ನಟಿ ಮಾತ್ರವಲ್ಲ ಬರಹಗಾರ್ತಿಯಾಗಿ ಗುರುತಿಸಿಕೊಂಡಿರುವ ಮೈಸೂರು ಸಾಹಿತ್ಯ ಸಂಭ್ರಮದಲ್ಲಿ ಇತ್ತೀಚೆಗೆ ರಂಜನಿ ಭಾಗಿಯಾಗಿದ್ದರು. ಈ ಸಮಾರಂಭದಲ್ಲಿ ಗೂಗಲ್ ಸೀರೆ ಉಟ್ಟು ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಕುರಿತ ಫೋಟೋ ಶೇರ್ ಮಾಡಿ, ಚೆಂದದ ಅಡಿಬರಹ ನೀಡಿದ್ದಾರೆ. `ಹೆಣ್ಮಕ್ಕಳ ಮನಸ್ಸು ಅರ್ಥ ಆಗಲ್ಲ ಅನ್ನೋರು ಗೂಗಲ್ ಮಿ’ ಎಂದು ಪೋಸ್ಟ್ ಮಾಡಿದ್ದಾರೆ. ಒಟ್ನಲ್ಲಿ ನಟಿಯ ಸೀರೆ ಅಭಿಮಾನಿಗಳ ಪ್ರಶಂಸೆಗೆ ಪಾತ್ರವಾಗಿದೆ.
Live Tv
[brid partner=56869869 player=32851 video=960834 autoplay=true]