ಹಳಿತಪ್ಪಿದ ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲು – ಪ್ರಯಾಣಿಕರು ಪಾರು

Public TV
1 Min Read
train

ಬೆಂಗಳೂರು: ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ 5 ಬೋಗಿಗಳು ಇಂದು ಮುಂಜಾನೆ ಹಳಿ ತಪ್ಪಿದೆ.

ಇಂದು ಮುಂಜಾನೆ 3:50 ರ ಸುಮಾರಿಗೆ, ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲು ತೊಪ್ಪೂರು – ಶಿವಾಡಿ ಬಳಿ ಚಲಿಸುತ್ತಿದ್ದ ವೇಳೆ ಹಠಾತ್ ಆಗಿ ಬಂಡೆಗಳು ಉರುಳಿ ಬಿದ್ದಿದೆ. ಹೀಗಾಗಿ ರೈಲಿನ 5 ಬೋಗಿಗಳು ಹಳಿ ತಪ್ಪಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರೈಲಿನಲ್ಲಿದ್ದ ಪ್ರಯಾಣಿಸುತ್ತಿದ್ದ 2,348 ಪ್ರಯಾಣಿಕರು ಸಹ ಸುರಕ್ಷಿತರಾಗಿದ್ದಾರೆ. ಇದನ್ನೂ ಓದಿ: ಚಳಿಗೆ ಬಿಸಿ ಬಿಸಿಯಾದ ಇಡ್ಲಿ ಮಂಚೂರಿ ಸಖತ್ ಟೇಸ್ಟ್

ಇದೀಗ ಅಪಘಾತ ಸ್ಥಳಕ್ಕೆ ಬೆಂಗಳೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶ್ಯಾಮ್ ಸಿಂಗ್ ಮತ್ತು ಸ್ಥಳೀಯ ಆಡಳಿತವು ಭೇಟಿ ನೀಡಿದೆ ಮತ್ತು ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ಮನೆಯಲ್ಲಿದ್ರೆ ಮಕ್ಕಳ ಸಂಖ್ಯೆ ಹೆಚ್ಚಾಗುತ್ತೆ ಅನ್ನೋ ಭಯವಿದೆ: ಸೈಫ್ ಆಲಿ ಖಾನ್

Share This Article
Leave a Comment

Leave a Reply

Your email address will not be published. Required fields are marked *