ಲಕ್ನೋ: ಕಾನ್ಪುರದಲ್ಲಿ ಶುಕ್ರವಾರ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಸಾವಿರ ಮಂದಿ ಮೇಲೆ ಎಫ್‍ಐಆರ್ ದಾಖಲಾಗಿದ್ದು, 18 ಮಂದಿಯನ್ನು ಬಂಧಿಸಲಾಗಿದೆ.
ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ನೀಡಿದ್ದ ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿ ಶುಕ್ರವಾರ ಮಧ್ಯಾಹ್ನ ಮುಸ್ಲಿಂ ಸಮುದಾಯದ ಗುಂಪೊಂದು ಕಾನ್ಪುರದ ಪ್ರಸಿದ್ಧ ಮಾರುಕಟ್ಟೆಯೊಂದರ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸಲು ಯತ್ನಿಸಿದೆ. ಈ ವೇಳೆ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಲು ನಿರಾಕರಿಸಿದ ಹಿನ್ನೆಲೆ ಎರಡು ಗುಂಪುಗಳ ನಡುವೆ ಹಿಂಸಾಚಾರ ಭುಗಿಲೆದ್ದಿದೆ.
Advertisement
Advertisement
ಬಂದ್‍ಗೆ ಬೆಂಬಲ ನೀಡಲು ನಿರಾಕರಿಸಿದ್ದಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆಯುಂಟಾಗಿದ್ದು, ಕಲ್ಲು ತೂರಾಟ ನಡೆಸಲಾಯಿತು. ಕಚ್ಚಾ ಬಾಂಬ್‍ಗಳನ್ನು ಎಸೆಯಲಾಗಿದೆ. ಈ ವೇಳೆ ಕಿಡಿಗೇಡಿಗಳ ಗುಂಪನ್ನು ಚದುರಿಸಲು ಪೊಲೀಸರು ಲಾಠಿಚಾರ್ಚ್ ನಡೆಸಿದ್ದು, ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಪೊಲೀಸ್ ಅಧಿಕಾರಿ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎಂದು ಕಾನ್ಪುರ ಪೊಲೀಸ್ ಕಮಿಷನರ್ ವಿಜಯ್ ಸಿಂಗ್ ಮೀನಾ ತಿಳಿಸಿದ್ದಾರೆ. ಇದನ್ನೂ ಓದಿ: ತಲ್ವಾರ್‌ನಲ್ಲಿ ಕೇಕ್ ಕಟ್ – ಮೂವರ ಬಂಧನ
Advertisement
Advertisement
ಈ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 18 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಮೂರು ಎಫ್‍ಐಆರ್‌ಗಳನ್ನು ದಾಖಲಿಸಲಾಗಿದೆ. ಈ ಪೈಕಿ 40 ಮಂದಿ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಇನ್ನೂ 1,000 ಮಂದಿಯ ಗುರುತನ್ನು ಪತ್ತೆಹಚ್ಚಬೇಕಾಗಿದೆ. ಇದನ್ನೂ ಓದಿ: ಆ್ಯಸಿಡ್ ಹಾಕಿರೋ ಯುವತಿಗೆ ನಾನೇ ಲೈಫ್ ಕೋಡ್ತೀನಿ, ಕ್ಷಮಿಸಿ ನಾನೊಬ್ಬ ಪಾಪಿ: ಆ್ಯಸಿಡ್ ನಾಗ
ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ವಾಹಿನಿಯೊಂದರ ಸಂದರ್ಶನದಲ್ಲಿ ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದನ್ನು ಖಂಡಿಸಿ ಕಾನ್ಪುರದಲ್ಲಿ ಘರ್ಷಣೆ ನಡೆದಿದೆ.