ನವದೆಹಲಿ: ಪ್ರವಾದಿ ಮೊಹಮ್ಮದ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ರಾಷ್ಟ್ರೀಯ ವಕ್ತಾರರಾದ ನೂಪುರ್ ಶರ್ಮಾರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.
Advertisement
ಈ ಬಗ್ಗೆ ಪತ್ರದ ಮೂಲಕ ಸ್ಪಷ್ಟಪಡಿಸಿರುವ ಬಿಜೆಪಿ ಶಿಸ್ತು ಪಾಲನಾ ಕಮಿಟಿಯ ಕಾರ್ಯದರ್ಶಿ ಓಂ ಪಾಠಕ್, ಪಕ್ಷದ ಶಿಸ್ತಿನ ವಿರುದ್ಧವಾಗಿ ನಡೆದುಕೊಂಡ ಕಾರಣ ನೂಪುರ್ ಶರ್ಮಾರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಲಂಕಾಗೆ 3.3 ಟನ್ ಔಷಧ ಪೂರೈಕೆ – ಭಾರತ ಸರ್ಕಾರದಿಂದ ನೆರವು
Advertisement
BJP distances itself from comments made by its spokesperson Nupur Sharma on the Prophet pic.twitter.com/XJX8Lyc1Ky
— Nidhi Razdan (@Nidhi) June 5, 2022
Advertisement
ನೂಪುರ್ ಶರ್ಮಾ, ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಮತ್ತು ಅವರ ಪತ್ನಿಯ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಪುಣೆ ಮುನ್ಸಿಪಲ್ ಕಾಪೋರೇಷನ್ (ಪಿಎಂಸಿ) ಮಾಜಿ ಕಾರ್ಪೊರೇಟರ್ ಅಬ್ದುಲ್ ಗಫೂರ್ ಪಠಾಣ್ ನೀಡಿದ ದೂರಿನ ಮೇರೆಗೆ ಕೊಂಡ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Advertisement