ಜೈಪುರ: ಬಾಲಕಿಯರ ಹಾಸ್ಟೆಲ್‍ನಲ್ಲಿ ತಂಗಿದ್ದ ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿದ್ದಾಗ ಹಾಸ್ಟೆಲ್ ಸಿಬ್ಬಂದಿ ವೀಡಿಯೋ ಮಾಡಿದ್ದಾನೆ ಎಂದು ಆರೋಪಿಸಿದ ಹಿನ್ನೆಲೆ ಕಾನ್ಪುರ ಪೊಲೀಸರು (Kanpur Police) ಕಸ ಗುಡಿಸುವವನನ್ನು (Sweeper) ಬಂಧಿಸಿದ್ದಾರೆ.
ಸಾಯಿ ನಿವಾಸ್ ಬಾಲಕಿಯರ ಹಾಸ್ಟೆಲ್‍ನಲ್ಲಿ (Sai Niwas Girls Hostel) ಉಳಿದುಕೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಕಸ ಗುಡಿಸುವ ಸಿಬ್ಬಂದಿ ತಾನು ಸ್ನಾನ ಮಾಡುತ್ತಿರುವಾಗ ವೀಡಿಯೋ ಮಾಡಿದ್ದಾನೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಮೊದಲಿಗೆ ಪೊಲೀಸರು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ ಇತರ ಹುಡುಗಿಯರು ತಾವು ಸ್ನಾನ ಮಾಡುತ್ತಿದ್ದ ವೀಡಿಯೋವನ್ನು ಆರೋಪಿ ರೆಕಾರ್ಡ್ ಮಾಡಿದ್ದಾನೆ ಎಂದು ಆರೋಪಿಸಿದ ನಂತರ ಈ ವಿಚಾರವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.
Advertisement
Advertisement
ಇದೀಗ ಆರೋಪಿಯ ಬಳಿ ಇದ್ದ ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡು ವಿಧಿವಿಜ್ಞಾನ ವಿಶ್ಲೇಷಣೆಗೆ ಕಳುಹಿಸಲಾಗಿದೆ ಎಂದು ಕಲ್ಯಾಣಪುರದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಡಿಕೆ ಶುಕ್ಲಾ ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಸ್ನಾನದ ವೀಡಿಯೋ ಮಾಡಿದ್ದಾರೆ – ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಠಾಣೆ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ
Advertisement
Advertisement
ಹಾಸ್ಟೆಲ್ ಸಿಬ್ಬಂದಿಯ ಮೊಬೈಲ್‍ನಲ್ಲಿ ಅಶ್ಲೀಲ ವೀಡಿಯೋಗಳಿವೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದರು. ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವೀಡಿಯೋಗಳು ಹೆಚ್ಚಾಗಿವೆ ಎಂದು ಆರೋಪಿಸಲಾಗಿತ್ತು. ಹಾಸ್ಟೆಲ್ ಕಟ್ಟಡದ ಸ್ಕೈಲೈಟ್‍ನಿಂದ ಉದ್ಯೋಗಿ ವೀಡಿಯೊಗಳನ್ನು ಚಿತ್ರೀಕರಿಸಿದ್ದಾನೆ. ಸುಮಾರು 8 ವರ್ಷಗಳಿಂದ ಆರೋಪಿ ಈ ಕೆಲಸ ಮಾಡಿಕೊಂಡು ಬಂದಿದ್ದಾನೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.
ವಿಚಾರಣೆ ವೇಳೆ ಆರೋಪಿ ಸುಮಾರು 8 ವರ್ಷಗಳಿಂದ ಹಾಸ್ಟೆಲ್‍ನಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ತಿಳಿಸಿದ್ದು, ಇದೀಗ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ ಮತ್ತು ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಪಡಿತರ ಚೀಟಿ ಹೊಂದಿದ್ದ ಸರ್ಕಾರಿ ನೌಕರರಿಗೆ ಶಾಕ್ ಕೊಟ್ಟ ಆಹಾರ ಇಲಾಖೆ