ಲಕ್ನೋ: ಪತ್ನಿ ವರದಕ್ಷಿಣೆ ತಂದು ಕೊಡಲಿಲ್ಲವೆಂದು ಪತಿಯೊಬ್ಬ ಸ್ನೇಹಿತರ ಜೊತೆ ಸೇರಿ ಪತಿಯನ್ನು ಅತ್ಯಾಚಾರ ಮಾಡಿರುವ ಘಟನೆಯೊಂದು ಕಾನ್ಪುರದಲ್ಲಿ ನಡೆದಿದೆ.
ವರದಕ್ಷಿಣೆಗಾಗಿ ಪತಿಯೊಬ್ಬ ಪತ್ನಿಯ ಕುಟುಂಬವನ್ನು ಪೀಡಿಸುತ್ತಿದ್ದ. ಇತ್ತ ಪತ್ನಿಗೂ ಕಿರುಕುಳ ನೀಡುತ್ತಿದ್ದ. ಪತ್ನಿಯ ಕುಟುಂಬ ವರದಕ್ಷಿಣೆಯನ್ನು ನೀಡಲಿಲ್ಲವೆಂದು ತನ್ನ ಸ್ನೇಹಿತರ ಜೊತೆ ಸೇರಿ ಪತ್ನಿಯನ್ನು ಪತಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾನೆ. ಈ ಹಿನ್ನೆಲೆ ಮಹಿಳೆಯ ಕುಟುಂಬ, ಆಕೆಯ ಪತಿ ಮತ್ತು ಆತನ ಸ್ನೇಹಿತರ ವಿರುದ್ಧ ಕಿರುಕುಳ ಮತ್ತು ಅತ್ಯಾಚಾರ ಆರೋಪದ ಮೇಲೆ ಚಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಮ್ಯೂಸಿಕ್ ಶೂಟ್ ವೇಳೆ ದಾಳಿ: 8 ಮಹಿಳಾ ರೂಪದರ್ಶಿಗಳ ಮೇಲೆ ಅತ್ಯಾಚಾರ
ದೂರಿನಲ್ಲಿ ಏನಿದೆ?
2020 ರ ಮಾರ್ಚ್ 6 ರಂದು ನಾವು ಮದುವೆಯಾಗಿದ್ದು, ಅಂದಿನಿಂದ ನನ್ನ ಪತಿ ವರದಕ್ಷಿಣೆಯಾಗಿ 2 ಲಕ್ಷ ರೂ. ಮತ್ತು ಕಾರಿಗೆ ಬೇಡಿಕೆಯಿಟ್ಟಿದ್ದ. ಅವರ ಬೇಡಿಕೆಗಳನ್ನು ನಾವು ಈಡೇರದಿದ್ದಾಗ ನನ್ನನ್ನು ಕೊಠಡಿಯಲ್ಲಿ ಕೂಡಿ ಹಾಕಲಾಗಿತ್ತು. ಅಷ್ಟೇ ಅಲ್ಲದೇ ನನ್ನ ಪತಿ ತನ್ನ ಮೂವರು ಸ್ನೇಹಿತರನ್ನು ಕರೆದುಕೊಂಡು ಬಂದು ನನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆ. ಇದಕ್ಕೆ ನಾನು ವಿರೋಧ ವ್ಯಕ್ತಪಡಿಸಿದಾಗ ನನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಸಹಾಯಕ ಪೊಲೀಸ್ ಆಯುಕ್ತ(ಎಸಿಪಿ) ಮೃಗಾಂಕ್ ಪಾಠಕ್ ಮಾತನಾಡಿ, ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ನಂತರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಫೈನಲ್ ತಲುಪಿದ ಕನ್ನಡಿಗ, ಈಜುಪಟು ಶ್ರೀಹರಿ ನಟರಾಜ್