ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾದ ಮೂವರು ವ್ಯಕ್ತಿಗಳು ಗುಣಮುಖರಾಗಿದ್ದು ನಾಳೆ ಡಿಸ್ಚಾರ್ಜ್ ಆಗಲಿದ್ದಾರೆ.
ಡೆಲ್ ಕಂಪನಿಯ ಟೆಕ್ಕಿ, ಆತನ ಪತ್ನಿ, ಮಗಳಿಗೆ ಕೊರೊನಾ ಬಂದಿತ್ತು. ಅಮೆರಿಕದಿಂದ ಮಾರ್ಚ್ 1ರಂದು ಬೆಂಗಳೂರಿಗೆ ಬಂದಿದ್ದ ಡೆಲ್ ಕಂಪನಿಯ ಟೆಕ್ಕಿಗೆ ಕೊರೊನಾ ಪಾಸಿಟಿವ್ ಬಂದಿತ್ತು.
Advertisement
Advertisement
ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಇಡೀ ಕುಟುಂಬವನ್ನು ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾರ್ಚ್ 9 ರಂದು ಸುದ್ದಿಗೋಷ್ಠಿ ನಡೆಸಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಕೊರೊನಾ ಬಂದಿರುವ ವಿಚಾರವನ್ನು ದೃಢಪಡಿಸಿದ್ದರು.
Advertisement
ಟೆಕ್ಕಿಯ ಪತ್ನಿ, ತನಗೆ ಮತ್ತು ಮಗಳಿಗೂ ಕೊರೊನಾ ಬಂದ ವಿಚಾರವನ್ನು ಶಾಲೆಗೆ ತಿಳಿಸಿದ್ದರು. ಈ ಸುದ್ದಿ ತಿಳಿದ ಬಳಿಕ ಶಾಲೆಯನ್ನು ಆಡಳಿತ ಮಂಡಳಿ ಮುಚ್ಚಿತ್ತು. ಈಗ ಕರ್ನಾಟಕದಲ್ಲಿ 6 ಮಂದಿಗೆ ಕೊರೊನಾ ಪೀಡಿತರಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
6 ಮಂದಿ ಯಾರೆಲ್ಲ?
1. ಮೈಂಡ್ ಟ್ರೀ ಕಂಪನಿಯ ಟೆಕ್ಕಿ
2. ಗೂಗಲ್ ಕಂಪನಿಯ ಟೆಕ್ಕಿ
3. ಕೊರೊನಾದಿಂದ ಮೃತಪಟ್ಟ ಕಲಬುರಗಿ ವ್ಯಕ್ತಿಯ ಮಗಳು
4. ಮೈಂಡ್ ಟ್ರೀ ಕಂಪನಿಯ ಟೆಕ್ಕಿ ಜೊತೆ ಪ್ರಯಾಣಿಸಿದ ಸಹೋದ್ಯೋಗಿ
5. ಯುಕೆ ಪ್ರವಾಸದಿಂದ ಹಿಂದಿರುಗಿದ ವಿದ್ಯಾರ್ಥಿನಿ
6 ಕೊರೊನಾದಿಂದ ಮೃತಪಟ್ಟ ಕಲಬುರಗಿ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದ ವೈದ್ಯ