ರಿಷಬ್ ಶೆಟ್ಟಿ (Rishabh Shetty) ನಟಿಸಿ, ನಿರ್ದೇಶನ ಮಾಡಲಿರುವ ‘ಕಾಂತಾರ 2’ (Kantara 2) ಸಿನಿಮಾದ ಬಜೆಟ್ (Budget) ಬಗ್ಗೆ ಹಲವು ದಿನಗಳಿಂದ ಚರ್ಚೆ ನಡೆಯುತ್ತಲೇ ಇದೆ. ಕಾಂತಾರ ಸಿನಿಮಾದ ಬಜೆಟ್ ಗಿಂತ ಎರಡ್ಮೂರು ಪಟ್ಟು ಹೆಚ್ಚಿನ ಬಜೆಟ್ ಬೇಡುವಂತಹ ಚಿತ್ರ ಇದಾಗಲಿದೆ ಎಂದು ಹೇಳಲಾಗಿತ್ತು. ಆದರೆ, ನಿಜವಾದ ಬಜೆಟ್ ಅನ್ನು ರಾಜ್ ಬಿ ಶೆಟ್ಟಿ (Raj B Shetty) ಬಾಯ್ಬಿಟ್ಟಿದ್ದಾರೆ.
ಸದ್ಯ ರಾಜ್ ಬಿ ಶೆಟ್ಟಿ ಅವರ ಟೋಬಿ ಸಿನಿಮಾ ಮಲಯಾಳಂನಲ್ಲಿ ಬಿಡುಗಡೆ ಆಗುತ್ತಿದೆ. ಹೀಗಾಗಿ ಕೇರಳದಲ್ಲಿ ಅವರು ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿನ ಮಾಧ್ಯಮವೊಂದರ ಜೊತೆ ಮಾತನಾಡಿರುವ ರಾಜ್ ಬಿ ಶೆಟ್ಟಿ ಕಾಂತಾರ 2 ಸಿನಿಮಾದ ಅಂದಾಜು ಬಜೆಟ್ ಅನ್ನು ಹೇಳಿಕೊಂಡಿದ್ದಾರೆ. ಇದು ನೂರು ಕೋಟಿ ಬೇಡುವಂತಹ ಚಿತ್ರ ಎಂದು ಮಾತನಾಡಿದ್ದಾರೆ.
ಕಾಂತಾರ 2 ಸಿನಿಮಾ ಸ್ಕ್ರಿಪ್ಟ್ ಹಂತದಲ್ಲಿದೆ. ಇದು ನೂರಾರು ಕೋಟಿ ಬಜೆಟ್ ನಲ್ಲಿ ತಯಾರಾಗುವಂತಹ ಬಿಗ್ ಬಜೆಟ್ ಸಿನಿಮಾ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಅಲ್ಲಿಗೆ ಕಾಂತಾರ 2 ಸಿನಿಮಾದ ಬಜೆಟ್ ಬಹಿರಂಗವಾಗಿದೆ. ಇದರ ಜೊತೆಗೆ ಚಾರ್ಲಿ ಸಿನಿಮಾದ ಬಗ್ಗೆಯೂ ಮಾಹಿತಿ ಹಂಚಿಕೊಂಡಿದ್ದು, ಚಾರ್ಲಿ 2 ಸಿನಿಮಾ ಬರುವುದಕ್ಕೆ ಸಾಧ್ಯವೆ ಇಲ್ಲ. ನಿರ್ದೇಶಕರು ಬೇರೆ ಕಥೆಯಲ್ಲಿ ಮಗ್ನರಾಗಿದ್ದಾರೆ ಎಂದಿದ್ದಾರೆ.
ಕಾಂತಾರ 2 ಸಿನಿಮಾದ ಕೆಲಸದಲ್ಲಿ ರಿಷಬ್ ಶೆಟ್ಟಿ ತೊಡಗಿಕೊಂಡಿದ್ದಾರೆ. ಶೂಟಿಂಗ್ ಸ‍್ಥಳಗಳು, ಕಲಾವಿದರ ಆಯ್ಕೆಯ ಜೊತೆಗೆ ಸ್ಕ್ರಿಪ್ಟ್ ಕೆಲಸದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಮುಹೂರ್ತ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಹೊಂಬಾಳೆ ಫಿಲ್ಮ್ಸ್ ನೀಡುತ್ತದೆ ಎಂದು ಈ ಹಿಂದೆಯೇ ರಿಷಬ್ ಶೆಟ್ಟಿ ಹೇಳಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]